ಬೆಂಗಳೂರು: ಸುಳ್ಯ ನಗರ ಸೇರಿದಂತೆ ವಿವಿಧ ಭಾಗಗಳಲ್ಲಿ ಮೋಡ ಕವಿದ ವಾತಾವರಣ ಇದ್ದು ಮಳೆಯಾಗುವ ಸಾಧ್ಯತೆ ಇದೆ. ಉರಿ ಸೆಕೆಯ ವಾತಾವರಣ ಇತ್ತು. ಮಧ್ಯಾಹ್ನದ ಬಳಿಕ ಮೋಡ ಕವಿದ ವಾತಾವರಣ ಇದೆ. ನಿನ್ನೆ ಕೆಲವು ಕಡೆ ಹನಿ ಮಳೆ ಸಾಧಾರಣ ಮಳೆ ಬಂದಿದೆ. ಮಡಪ್ಪಾಡಿ ಹಾಗೂ ಕಲ್ಲಾಜೆಯಲ್ಲಿ 2 ಮಿ.ಮಿ.ಮಳೆಯಾಗಿತ್ತು. ಈ ಮಧ್ಯೆ
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೇ 8ರಿಂದ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ವಿವಿಧ ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ. ಭಾನುವಾರ ದಕ್ಷಿಣ ಒಳನಾಡಿನ ಎಲ್ಲ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂಬ ಸೂಚನೆ ಇದೆ.
ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಒಳನಾಡಿನ ರಾಯಚೂರು, ಗದಗ, ಬೀದರ್, ಕೊಪ್ಪಳ, ಬಾಗಲಕೋಟೆ, ಕಲಬುರಗಿ ಜಿಲ್ಲೆಯ ಅಲ್ಲಲ್ಲಿ ಮಳೆಯಾಗಲಿದೆ.ಸಂಜೆ ಅಥವಾ ರಾತ್ರಿ ವೇಳೆ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಸೂಚನೆ ನೀಡಿದೆ.