ಸುಳ್ಯ:ಪ್ರಧಾನಿ ನರೇಂದ್ರ ಮೋದಿಯವರು ಗುರುವಾರ ತಮ್ಮ 76ನೇ ಹುಟ್ಟುಹಬ್ಬವನ್ನು ಆಚರಿಸಿದರು.ಪ್ರಧಾನಿ ಮೋದಿ ಜನ್ಮ ದಿನ ಪ್ರಯುಕ್ತ ಸುಳ್ಯದಲ್ಲಿ ಬಿಜೆಪಿ ಕಾರ್ಯಕರ್ತರು ವಿಶೇಷ ಪೂಜೆ ಪ್ರಾರ್ಥನೆ ಸಲ್ಲಿಸಿದ್ದಾರೆ. ಬಿಜೆಪಿ ಸುಳ್ಯ ನಗರ ಮಹಾಶಕ್ತಿ ಕೇಂದ್ರದ
ಹಳೆಗೇಟ್ ಶಕ್ತಿಕೇಂದ್ರದ ವತಿಯಿಂದ ಪೈಚಾರ್ ಶ್ರೀ ಮಾರಿಯಮ್ಮ ವೀರಭದ್ರ ಸ್ವಾಮಿ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು. ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ವಿನಯ ಕುಮಾರ್ ಕಂದಡ್ಕ, ಸುಳ್ಯ ನಗರ ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ನಾರಾಯಣ ಎಸ್.ಎಂ, ಪ್ರಮುಖರಾದ ಬುದ್ಧ ನಾಯ್ಕ,ರಮೇಶ್ ಇರಂತಮಜಲು, ಸಂಜೀವ, ಬಾಬು ಮೊದಲಾದವರು ಉಪಸ್ಥಿತರಿದ್ದರು.








