ಹೊಸದಿಲ್ಲಿ :ಮೂರನೇ ಬಾರಿ ಎನ್ಡಿಎ ಪಕ್ಷವನ್ನು ಗೆಲ್ಲಿಸಿದ್ದಕ್ಕಾಗಿ ಧನ್ಯವಾದಗಳು.ಇಂದಿನ ಲೋಕಸಭಾ ಚುನಾವಣೆಯ ಗೆಲುವು ಸಬ್ಕಾ ಸಾಥ್ ಸಬ್ಕಾ ವಿಕಾಸ್ ಧ್ಯೇಯದ ಜಯ. ಇದು ದೇಶದ 140 ಕೋಟಿ ಜನರ ಜಯ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
2024 ರ ಸಾರ್ವತ್ರಿಕ ಚುನಾವಣೆಯ ಫಲಿತಾಂಶದ ನಂತರ ದಿಲ್ಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಆಯೋಜಿಸಿದ್ದ
ವಿಜಯೋತ್ಸವ ಕಾರ್ಯಕ್ರಮದಲ್ಲಿ ನೆರೆದಿದ್ದ ಕಾರ್ಯಕರ್ತರನ್ನು ಉದ್ದೇಶಿಸಿ ಅವರು ಮಾತನಾಡಿದರು.ಜನರು ಸತತ ಮೂರನೇ ಬಾರಿಗೆ ಎನ್ಡಿಎ ಮೇಲೆ ನಂಬಿಕೆ ಇಟ್ಟಿದ್ದಾರೆ. ಇದು ಭಾರತದ ಇತಿಹಾಸದಲ್ಲಿ ಒಂದು ಐತಿಹಾಸಿಕ ಸಾಧನೆಯಾಗಿದೆ. ಈ ಪ್ರೀತಿಗಾಗಿ ಜನತಾ ಜನಾರ್ದನ್ಗೆ ವಂದನೆಗಳು. ಜನರ ಆಶೋತ್ತರಗಳನ್ನು ಈಡೇರಿಸಲು ಕಳೆದ ದಶಕದಲ್ಲಿ ಮಾಡಿದ ಉತ್ತಮ ಕೆಲಸವನ್ನು ನಾವು ಮುಂದುವರಿಸುತ್ತೇವೆ ಎಂದು ಅವರಿಗೆ ಭರವಸೆ ನೀಡುತ್ತೇನೆ. ನಮ್ಮ ಎಲ್ಲಾ ಕಾರ್ಯಕರ್ತರ ಶ್ರಮಕ್ಕಾಗಿ ನಾನು ಅಭಿನಂದಿಸುತ್ತೇನೆ. ಅವರ ಅಸಾಧಾರಣ ಪ್ರಯತ್ನಗಳನ್ನು ವಿವರಿಸಲು ಪದಗಳು ಎಂದಿಗೂ ಸಾಲುವುದಿಲ್ಲ’ ಎಂದು ತಮ್ಮ ಎಕ್ಸ್ ಖಾತೆಯಲ್ಲಿ ಅವರು ಬರೆದುಕೊಂಡಿದ್ದಾರೆ.