ನವದೆಹಲಿ:ಮುಖ್ಯಮಂತ್ರಿ ಮತ್ತು ಪ್ರಧಾನಿಯಾಗಿ 8,931 ದಿನಗಳನ್ನು ಪೂರೈಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಸರ್ಕಾರದ ಮುಖ್ಯಸ್ಥರಾಗಿ ದೀರ್ಘ ಅವಧಿಯ ಸೇವೆ ಸಲ್ಲಿಸಿದ ದಾಖಲೆ ನಿರ್ಮಿಸಿದ್ದಾರೆ.
ಪವನ್ ಕುಮಾರ್ ಚಾಮ್ಲಿಂಗ್ ಅವರು ಸಿಕ್ಕಿಂ ಮುಖ್ಯಮಂತ್ರಿಯಾಗಿ 8,930 ದಿನ ಪೂರೈಸುವ ಮೂಲಕ ದೇಶದಲ್ಲಿಯೇ
ದೀರ್ಘಾವಧಿಗೆ ಸರ್ಕಾರದ ಮುಖ್ಯಸ್ಥರಾಗಿದ್ದ ಖ್ಯಾತಿ ಹೊಂದಿದ್ದರು. ಇದೀಗ ಮೋದಿ ಅವರು ಚಾಮ್ಲಿಂಗ್ ದಾಖಲೆಯನ್ನು ಮುರಿದಿದ್ದಾರೆ.
ಪ್ರಸ್ತುತ ಮೂರನೇ ಅವಧಿಗೆ ಪ್ರಧಾನಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಕೇಂದ್ರ ಸಚಿವರಾದ ರಾಜನಾಥ ಸಿಂಗ್, ಕಿರಣ್ ರಿಜಿಜು ಸೇರಿದಂತೆ ಬಿಜೆಪಿಯ ಹಲವು ನಾಯಕರು ಮೋದಿ ಅವರನ್ನು ಅಭಿನಂದಿಸಿದ್ದಾರೆ.
2001ರ ಅಕ್ಟೋಬರ್ 7ರಂದು ಮೊದಲ ಬಾರಿ ಗುಜರಾತ್ ಮುಖ್ಯಮಂತ್ರಿಯಾಗಿ ಆಯ್ಕೆ
ಮೂರು ಬಾರಿ ಗುಜರಾತ್ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದಾರೆ.
2014ರ ಮೇ 26 – ಮೊದಲ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ ಅವರು ಪ್ರಸ್ತುತ ಮೂರನೇ ಬಾರಿ ಪ್ರಧಾನಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.














