ವಾರಾಣಸಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ವಾರಾಣಸಿ ಲೋಕಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದರು.ನಾಮಪತ್ರ ಸಲ್ಲಿಸುವುದಕ್ಕೂ ಮುನ್ನ ದಶಾಶ್ವಮೇಧ ಘಾಟ್ ಮತ್ತು ಕಾಲಭೈರವ ದೇವಸ್ಥಾನದಲ್ಲಿ ಪ್ರಾರ್ಥನೆ
ಸಲ್ಲಿಸಿದ ಬಳಿಕ ನಾಮ ಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಸುವ ವೇಳೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಉಪಸ್ಥಿತರಿದ್ದರು.
2014ರಲ್ಲಿ ಮೊದಲ ಬಾರಿಗೆ ಗೆದ್ದಿದ್ದ ವಾರಾಣಸಿ ಲೋಕಸಭಾ ಕ್ಷೇತ್ರದಲ್ಲಿ ಮೂರನೇ ಬಾರಿಗೆ ಆಯ್ಕೆಯಾಗುವ ಭರವಸೆಯನ್ನು ಪ್ರಧಾನಿ ವ್ಯಕ್ತಪಡಿಸಿದ್ದಾರೆ.ನಾಮಪತ್ರ ಸಲ್ಲಿಸುವುದಕ್ಕೂ ಒಂದು ದಿನ ಮುನ್ನ ವಾರಾಣಸಿಯಲ್ಲಿ ರೋಡ್ ಶೋ ನಡೆಸುವ ಮೂಲಕ ಮತಯಾಚಿಸಿದ್ದಾರೆ.
ವಾರಾಣಸಿಯಲ್ಲಿ ಜೂನ್ 1 ರಂದು 7ನೇ ಮತ್ತು ಕೊನೆಯ ಹಂತದ ಚುನಾವಣೆ ನಡೆಯಲಿದೆ.