ನವದೆಹಲಿ: ನರೇಂದ್ರ ಮೋದಿ ಅವರು 3ನೇ ಭಾರಿ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇಂದು ಸಂಜೆ ರಾಷ್ಟ್ರಪತಿ ಭವನದಲ್ಲಿ ನಡೆದ ಪ್ರಮಾಣವಚನ ಸಮಾರಂಭದಲ್ಲಿ ಅವರು ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ರಾಷ್ಟಪತಿ ದ್ರೌಪತಿ ಮುರ್ಮು ಅವರು ಪ್ರಮಾಣ ವಚನ ಬೋಧಿಸಿದರು. ರಾಜ್ನಾಥ್ ಸಿಂಗ್, ಅಮಿತ್ ಷಾ, ನಿತಿನ್ ಗಡ್ಕರಿ, ಜೆಪಿ ನಡ್ಡಾ, ಶಿವರಾಜ್ ಸಿಂಗ್ ಚೌಹಾಣ್, ನಿರ್ಮಲಾ ಸೀತಾರಾಮನ್ ಸೇರಿದಂತೆ
ಪ್ರಮುಖರು ಪ್ರಮಾಣ ವಚನ ಸ್ವೀಕರಿಸಿದರು.
ಸತತ ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಇಂದು ಪ್ರಮಾಣವಚನ ಸ್ವೀಕರಿಸಿದ್ದಾರೆ.ದೇಶ, ವಿದೇಶದ ಗಣ್ಯರು ಉಪಸ್ಥಿತರಿದ್ದರು.ಬಾಂಗ್ಲಾದೇಶ ಪ್ರಧಾನಿ ಶೇಕ್ ಹಸಿನಾ, ಭೂತಾನ್ ಪ್ರಧಾನಿ ತ್ಸಷರಿಂಗ್ ತೊಬ್ಗೆ, ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಜು ಸೇರಿದಂತೆ ಹಲವು ಗಣ್ಯರು ಸಮಾರಂಭದಲ್ಲಿ ಪಾಲ್ಗೊಂಡಿದ್ದಾರೆ. ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯ ಮೂರ್ತಿ ಡಿವೈ ಚಂದ್ರಚೂಡ್, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಸಮಾರಂಭದಲ್ಲಿ ಪಾಲ್ಗೊಂಡಿದ್ದರು. ಬಾಲಿವುಡ್ ನಟ-ನಟಿಯರು, ಸೂಪರ್ ಸ್ಟಾರ್ ರಜನಿಕಾಂತ್ ಸೇರಿದಂತೆ ಭಾರಿ ಸಂಖ್ಯೆಯಲ್ಲಿ ಗಣ್ಯರು ಸೇರಿದ್ದರು.ಎನ್ಡಿಎ ಮೈತ್ರಿ ಸರ್ಕಾರದ ಸಂಪುಟಕ್ಕೆ ಸುಮಾರು 72 ಮಂದಿ ಸೇರ್ಪಡೆಯಾಗಲಿದ್ದಾರೆ.









