ಸುಳ್ಯ: ಮೂರನೇ ಅವಧಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಇಂದು ಸಂಜೆ 7.15ಕ್ಕೆ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಈ ಸಂದರ್ಭದಲ್ಲಿ ಸುಳ್ಯ ಮಂಡಲದಲ್ಲಿ ಬಿಜೆಪಿ ಕಾರ್ಯಕರ್ತರು ಬೂತ್ ಮಟ್ಟದಲ್ಲಿ
ಸಂಭ್ರಮಾಚರಣೆ ನಡೆಸಲಿದ್ದಾರೆ ಎಂದು ಬಿಜೆಪಿ ಸುಳ್ಯ ಮಂಡಲ ಸಮಿತಿ ಹೇಳಿದೆ. ಪ್ರಮಾಣ ವಚನ ಸ್ವೀಕಾರದ ನೇರ ಪ್ರಸಾರ ವೀಕ್ಷಣೆ, ಸಿಹಿ ಹಂಚಿ, ಪಟಾಕಿ ಸಿಡಿಸಿ ಕಾರ್ಯಕರ್ತರು ಸಂಭ್ರಮವನ್ನು ಆಚರಿಸಲಿದ್ದಾರೆ ಎಂದು ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ವಿನಯಕುಮಾರ್ ಕಂದಡ್ಕ ತಿಳಿಸಿದ್ದಾರೆ. ಸುಳ್ಯ ಹಾಗೂ ಕಡಬ ತಾಲೂಕಿನ ವಿವಿಧ ಕಡೆಗಳಲ್ಲಿ ಸಂಭ್ರಮಾಚರಣೆ ನಡೆಯಲಿದೆ.
ಪ್ರಧಾನಿಯಾಗಿ ಮೋದಿ ಪ್ರಮಾಣ ವಚನ ಸ್ವೀಕಾರ ಪ್ರಯುಕ್ತ ಬಿಜೆಪಿ ಕಾರ್ಯಕರ್ತರು ಹಾಗೂ ಅಭಿಮಾನಿಗಳು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಹಣ್ಣಿನ ಗಿಡ ನೆಡುವ ಕಾರ್ಯಕ್ರಮ, ಸಿಹಿ ತಿಂಡಿ ಹಂಚುವ ಕಾರ್ಯಕ್ರಮ, ಚಹಾಕೂಟ, ದೇವಾಲಯಗಳಲ್ಲಿ ವಿಶೇಷ ಪ್ರಾರ್ಥನೆ ಮತ್ತಿತರ ಕಾರ್ಯಕ್ರಮಗಳು ನಡೆಯಲಿದೆ.