ನವದೆಹಲಿ: 3ನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಜೂನ್ 8ರಂದು ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕೇಂದ್ರ ಸಂಪುಟ ಸಭೆ ಇಂದು ನಡೆಯಿತು.ಈ ವೇಳೆ 17ನೇ ಲೋಕಸಭೆಯನ್ನು
ವಿಸರ್ಜಿಸಲು ಶಿಫಾರಸು ಮಾಡಲಾಯಿತು.
ಎನ್ಡಿಎ ಒಕ್ಕೂಟ ಸರಳ ಬಹುಮತ ಪಡೆದಿರುವ ಹಿನ್ನೆಲೆಯಲ್ಲಿ ಮೂರನೇ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಪ್ರಧಾನಿಯಾಗಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ.ಪ್ರಮಾಣವಚನ ಕಾರ್ಯಕ್ರಮ ಜೂನ್ 8ರಂದು ನಡೆಯಲಿದೆ ಎಂದು ತಿಳಿದು ಬಂದಿದೆ. ಟಿಡಿಪಿ ಹಾಗೂ ಜೆಡಿಯು ಬೆಂಬಲದೊಂದಿಗೆ ಬಿಜೆಪಿ ಸರ್ಕಾರ ರಚಿಸುವ ಸಾಧ್ಯತೆಯಿದೆ.ಇಂದು ಎನ್ಡಿಎ ಒಕ್ಕೂಟದ ನಾಯಕರ ಸಭೆಯ ಬಳಿಕ ಪ್ರಮಾಣ ವಚನ ದಿನಾಂಕ ಅಧಿಕೃತ ಘೋಷಣೆಯಾಗುವ ಸಾಧ್ಯತೆ ಇದೆ.