ನವದೆಹಲಿ: ಪ್ರಧಾನಿ ಹುದ್ದೆಗೆ ನರೇಂದ್ರ ಮೋದಿ ಬುಧವಾರ ರಾಜೀನಾಮೆ ಸಲ್ಲಿಸಿದರು.ತಮ್ಮ ಸಂಪುಟ ಸಹದ್ಯೋಗಿಗಳ ಜೊತೆ ರಾಷ್ಟ್ರಪತಿ ಭವನಕ್ಕೆ ತೆರಳಿದ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ರಾಜೀನಾಮೆ ಪತ್ರವನ್ನು ಸಲ್ಲಿಸಿದರು. ರಾಜೀನಾಮೆ ಪತ್ರ ಸ್ವೀಕರಿಸಿದ ದ್ರೌಪದಿ ಮುರ್ಮು ಹೊಸ ಸರ್ಕಾರ ಅಧಿಕಾರ ವಹಿಸಿಕೊಳ್ಳುವವರೆಗೂ ಪ್ರಧಾನಿಯಾಗಿ
ಮುಂದುವರಿಯುವಂತೆ ಅವರು ಸೂಚಿಸಿದ್ದಾರೆ ಎಂದು ರಾಷ್ಟ್ರಪತಿ ಭವನದ ಮೂಲಗಳು ತಿಳಿಸಿವೆ. ಕೇಂದ್ರ ಸಚಿವ ಸಂಪುಟವು 17ನೇ ಲೋಕಸಭೆಯನ್ನು ವಿಸರ್ಜಿಸಲು ಶಿಫಾರಸು ಮಾಡಿತ್ತು. ಪ್ರಸ್ತುತ 17ನೇ ಲೋಕಸಭೆ ಅವಧಿ ಜೂನ್ 16ರಂದು ಕೊನೆಗೊಳ್ಳಲಿದೆ.
ಲೋಕಸಭಾ ಚುನಾವಣೆಯ ಫಲಿತಾಂಶ ನಿನ್ನೆ ಹೊರಬಂದಿದ್ದು ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿಕೂಟ ಬಹುಮತವನ್ನು ಪಡೆದುಕೊಂಡಿದೆ. 543 ಸ್ಥಾನಗಳಲ್ಲಿ ಎನ್ಡಿಎ 292 ಸ್ಥಾನಗಳನ್ನು ಪಡೆದುಕೊಂಡಿದೆ. ಹೊಸ ಸರಕಾರ ರಚನೆಯ ಪ್ರಕ್ರಿಯೆಗಳು ಆರಂಭವಾಗಲಿದ್ದು ಜೂ.8ರಂದು ನರೇಂದ್ರ ಮೋದಿ ಮೂರನೇ ಬಾರಿ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ.