ನವದೆಹಲಿ: ಜೂನ್ 9 ರಂದು ಸಂಜೆ 7.15ಕ್ಕೆ ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿಯವರು ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ಸಮಾರಂಭ ನಡೆಯಲಿದೆ. ಪ್ರಧಾನ ಮಂತ್ರಿ ಹಾಗೂ
ಮಂತ್ರಿ ಮಂಡಲದ ಇತರ ಸದಸ್ಯರಿಗೆ ಜೂನ್ 9ರ ಸಂಜೆ 7.15ಕ್ಕೆ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿಯವರು ಪ್ರಮಾಣವಚನ ಹಾಗೂ ಗೋಪ್ಯತಾ ವಿಧಿಯನ್ನು ಬೋಧಿಸಲಿದ್ದಾರೆ.ಅಂದು ಪ್ರಧಾನಿಯಾಗಿ ಸತತ ಮೂರನೇ ಬಾರಿಗೆ ನರೇಂದ್ರ ಮೋದಿ ಪ್ರಮಾಣಗೈಯಲಿದ್ದಾರೆ. ರಾಷ್ಟ್ರಪತಿ ಅವರು ಸರಕಾರ ರಚಿಸಲು ನರೇಂದ್ರ ಮೋದಿ ಅವರಿಗೆ ಸ್ವಾಗತ ನೀಡಿದರು.