ಬೆಂಗಳೂರು: ಬೆಂಗಳೂರಿನ ಇಸ್ರೊ ಕೇಂದ್ರಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಚಂದ್ರಯಾನ-3ರ ಯಶಸ್ಸಿಗಾಗಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೊ) ವಿಜ್ಞಾನಿಗಳನ್ನು ಅಭಿನಂದಿಸಿದರು. ಬಳಿಕ ಮಾತನಾಡಿದ ಅವರು ಇಡೀ ವಿಶ್ವವೇ ಭಾರತದ ವಿಜ್ಞಾನ, ತಂತ್ರಜ್ಞಾನವನ್ನು ಒಪ್ಪಿಕೊಂಡಿದೆ. ಇದಕ್ಕೆ ಕಾರಣ ನೀವು. ನಿಮ್ಮ
ಸಾಧನೆಯನ್ನು ಎಷ್ಟೇ ಕೊಂಡಾಡಿದರೂ ಅದು ಕಡಿಮೆಯೇ ಎಂದು ಹೇಳಿದರು.ನೀವೆಲ್ಲರೂ ಸೇರಿ ಭಾರತದ ಕನಸನ್ನು ನನಸು ಮಾಡಿದ್ದೀರಿ
ಆಗಸ್ಟ್ 23 ಚಂದ್ರಯಾನ-3 ಯಶಸ್ವಿಯಾದ ದಿನ. ಈ ದಿನವನ್ನು ಇನ್ನು ‘ರಾಷ್ಟ್ರೀಯ ಬಾಹ್ಯಾಕಾಶ ದಿನ‘ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಣೆ ಮಾಡಿದರು.ವಿಕ್ರಮ್ ಲ್ಯಾಂಡರ್ ಇಳಿದ ಸ್ಥಳವನ್ನು ‘ಶಿವಶಕ್ತಿ ಪಾಯಿಂಟ್’ ಎಂದು ಕರೆಯೋಣ. ಚಂದ್ರಯಾನ-2 ಪತನ ಸ್ಥಳಕ್ಕೆ ತಿರಂಗ ಪಾಯಿಂಟ್ ಎಂದು ಕರೆದರು. ಮೇಕ್ ಇನ್ ಇಂಡಿಯಾ ಈಗ ಚಂದ್ರನವರೆಗೂ ತಲುಪಿದೆ ಎಂದು ಮೋದಿ ಹೇಳಿದರು.
ದೇಶದ ಜನರ ಆಶೀರ್ವಾದ ನಮ್ಮ ಮೇಲಿದೆ. ವಿಜ್ಞಾನ, ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ನಾಯಕನಾಗುವ ಗುರಿಗೆ ಇದು ಪೂರಕವಾಗಲಿದೆ ಎಂದು ಮೋದಿ ಹೇಳಿದರು.
ವಿದೇಶ ಪ್ರವಾಸದಲ್ಲಿದ್ದ ಪ್ರಧಾನಮಂತ್ರಿ ಗ್ರೀಸ್ನಿಂದ ಶನಿವಾರ ಬೆಂಗಳೂರಿಗೆ ಆಗಮಿಸಿದರು.