ಲಂಡನ್: ಇಂಗ್ಲೆಂಡ್ ತಂಡದ ಆಲ್ರೌಂಡರ್ ಮೊಯಿನ್ ಅಲಿ ಅವರು ಅಂತರರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ.
ಮೊಯಿನ್ ಅಲಿ ಅವರು ಇದೇ ವರ್ಷ ನಡೆದ ಐಸಿಸಿ ಟಿ20 ವಿಶ್ವಕಪ್ನಲ್ಲಿ ಕೊನೆಯ ಬಾರಿಗೆ ಇಂಗ್ಲೆಂಡ್ ಪರ ಕಣಕ್ಕಿಳಿದಿದ್ದರು.ಮೊಯಿನ್ ಅಲಿ 2014ರಲ್ಲಿ
ವೆಸ್ಟ್ ಇಂಡೀಸ್ ವಿರುದ್ಧ ಅಂತರರಾಷ್ಟ್ರೀಯ ಕ್ರಿಕೆಟ್ಗೆ ಪದಾರ್ಪಣೆ ಮಾಡಿದ್ದರು. ಅವರು ಒಟ್ಟು 298 ಅಂತರರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದು, ಎಲ್ಲಾ ಮಾದರಿಗಳಲ್ಲೂ ಎಂಟು ಶತಕಗಳು ಮತ್ತು 28 ಅರ್ಧಶತಕಗಳನ್ನು ಸೇರಿದಂತೆ
6,678 ರನ್ ಗಳಿಸಿದ್ದಾರೆ. ಜತೆಗೆ, 366 ವಿಕೆಟ್ಗಳನ್ನು ಪಡೆದಿದ್ದಾರೆ. 2019ರ ವಿಶ್ವಕಪ್ ಮತ್ತು 2022ರ ಟಿ20 ವಿಶ್ವಕಪ್ ಗೆಲ್ಲುವಲ್ಲಿ ಪ್ರಮುಖ ಪಾತ್ರವಹಿಸಿದ್ದರು.ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಪರ ಮೊಯಿನ್ ಅಲಿ ಕಣಕ್ಕಿಳಿದಿದ್ದರು.