ಸುಳ್ಯ:ತೊಡಿಕಾನದಲ್ಲಿ ಕಾರು ತಡೆದು ನಿಲ್ಲಿಸಿ ವ್ಯಕ್ತಿಯೋರ್ವನ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟು 5 ಮಂದಿಯ ಮೇಲೆ ಸುಳ್ಯ ಪೊಲೀಸರು ಕೇಸು ದಾಖಲಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟು ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟು ಪೊಲೀಸರು ಹಲವರ ವಿಚಾರಣೆ ನಡೆಸಿದ್ದು
ತನಿಖೆ ಮುಂದುವರಿದಿದೆ. ಘಟನೆಗೆ ಸಂಬಂಧಿಸಿ ಐವರ ವಿರುದ್ಧ ಪ್ರಕರಣ ದಾಖಲಾಗಿದ್ದು ನಿಸ್ಪಕ್ಷವಾಗಿ ತನಿಖೆ ಮುಂದುವರಿಸಿ ಆರೋಪಿಗಳನ್ನು ಬಂಧಿಸಿ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಅರಂತೋಡಿನಲ್ಲಿ ರಬ್ಬರ್ ತೋಟವನ್ನು ಲೀಸ್ಗೆ ಪಡೆದ ಕೇರಳ ಮೂಲದ ವ್ಯಕ್ತಿಯೋರ್ವನ ಕಾರನ್ನು ತಡೆದು ಹಲ್ಲೆ ನಡೆಸಿದಾಗಿ ಆರೋಪಿಸಿ ದೂರು ನೀಡಲಾಗಿದೆ. ತನ್ನ ಪರಿಚಯಸ್ಥ ಯುವತಿಯೋರ್ವಳು ಮಡಿಕೇರಿಯಿಂದ ಸುಳ್ಯಕ್ಕೆ ಬರುತ್ತಿದ್ದು ವಿಶ್ರಾಂತಿ ಪಡೆಯಲು ರೂಂ ಬೇಕೆಂದು ಕೇಳಿಕೊಂಡ ಮೇರೆಗೆ ಸುಳ್ಯದಲ್ಲಿ ರೂಂ ವ್ಯವಸ್ಥೆ ಮಾಡಿ ಕಾರಲ್ಲಿ ತೊಡಿಕಾನಕ್ಕೆ ಹೋಗುತ್ತಿದ್ದ ವೇಳೆ ತಡೆದು ನಿಲ್ಲಿಸಿ 5 ಮಂದಿಯ ಯುವಕರ ತಂಡ ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಹಲ್ದೆಗೊಳಗಾದ ವ್ಯಕ್ತಿ ನೀಡಿರುವ ದೂರಿನ ಹಿನ್ನಲೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಈ ಪ್ರಕರಣದ ತನಿಖೆ ಆರಂಭಿಸಿದ ಪೊಲೀಸರು ಹಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಪ್ರಕರಣದ ತನಿಖೆ ಮುಂದುವರಿಸಿರುವ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.
ಬಿ.ಜೆ.ಪಿ. ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ಹಿಂದೂ ಮುಖಂಡ ಅರುಣ್ ಕುಮಾರ್ಪುತ್ತಿಲ ಮತ್ತಿತರರು ಸುಳ್ಯ ಠಾಣೆಗೆ ರಾತ್ರಿ ಆಗಮಿಸಿದ್ದರು.