ಮಾರುಕೇಶ್: ಉತ್ತರ ಆಫ್ರಿಕಾದ ಮೊರೊಕ್ಕೊ ದೇಶದಲ್ಲಿ ಸಂಭವಿಸಿದ ಪ್ರಬಲ ಭೂಕಂಪದಲ್ಲಿ ಮೃತಪಟ್ಟವರ ಸಂಖ್ಯೆ 2,000 ದಾಟಿದೆ.
2,000ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಈ ಪೈಕಿ 1,404 ಮಂದಿಯ ಪರಿಸ್ಥಿತಿ ಗಂಭೀರವಾಗಿದೆ ಎಂದು ಮೊರೊಕ್ಕೊ
ಆಂತರಿಕ ಸಚಿವಾಲಯ ತಿಳಿಸಿದೆ.ಕಟ್ಟಡಗಳ ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸುವ ಕಾರ್ಯ ಪ್ರಗತಿಯಲ್ಲಿದೆ. ನೂರಾರು ಕಟ್ಟಡಗಳು ನೆಲಸಮಗೊಂಡಿದ್ದು, ಸಾವಿರಾರು ಮಂದಿ ನಿರಾಶ್ರಿತರಾಗಿದ್ದಾರೆ.
ಮೊರೊಕ್ಕೊದಲ್ಲಿ ಮೂರು ದಿನಗಳ ಶೋಕಾಚರಣೆ ಘೋಷಿಸಲಾಗಿದೆ.
ಶುಕ್ರವಾರ ತಡರಾತ್ರಿ 6.8 ತೀವ್ರತೆಯ ಭೂಕಂಪ ಸಂಭವಿಸಿತ್ತು