ಸುಳ್ಯ:ವಿಶ್ವ ಹಿಂದೂ ಪರಿಷತ್, ಬಜರಂಗದಳ, ಮಾತೃಶಕ್ತಿ ದುರ್ಗಾವಾಹಿನಿ ಸುಳ್ಯ ಪ್ರಖಂಡ ಮತ್ತು ಮೊಸರು ಕುಡಿಕೆ ಉತ್ಸವ ಸಮಿತಿ ಸುಳ್ಯ ಇದರ ಆಶ್ರಯದಲ್ಲಿ ವಿಶ್ವ ಹಿಂದೂ ಪರಿಷತ್ನ ಸ್ಥಾಪನಾ ದಿನಾಚರಣೆಯ ಅಂಗವಾಗಿನಡೆದ ಸುಳ್ಯ ಮೊಸರು ಕುಡಿಕೆ ಉತ್ಸವದಲ್ಲಿ
ಅಟ್ಟಿ ಮಡಿಕೆ ಒಡೆಯುವ ಸ್ಪರ್ಧೆಯಲ್ಲಿ ಶ್ರೀ ಶಾಸ್ತಾವು ಯುವಕ ಮಂಡಲ ರೆಂಜಾಳ ಪ್ರಥಮ ಸ್ಥಾನ ಪಡೆದುಕೊಂಡಿತು. ಎಚ್ಟಿಎಂಸಿ ಸುಳ್ಯ ದ್ವಿತೀಯ ಸ್ಥಾನ ಹಾಗು ಯುವಕೇಸರಿ ಬಳಗ ಮುಳ್ಯ ಅಟ್ಲೂರು ತೃತೀಯ ಸ್ಥಾನ ಪಡೆಯಿತು.ಅಟ್ಟಿ ಮಡಕೆ ಒಡೆಯುವ ಸ್ಪರ್ಧೆಯ ವಿಜೇತ ತಂಡಕ್ಕೆ ಪ್ರಥಮ ಬಹುಮಾನ ರೂ.17,013 ಮತ್ತು ಶಾಶ್ವತ ಫಲಕ, ದ್ವಿತೀಯ ರೂ.12,013 ಮತ್ತು ಶಾಶ್ವತ ಫಲಕ, ತೃತೀಯ ರೂ. 9,013 ಮತ್ತು ಶಾಶ್ವತ ಫಲಕ ನೀಡಲಾಯಿತು.









