ಸುಳ್ಯ: ದೇವತಾನುಗ್ರಹದಿಂದ ನಡೆಯುವ ಉತ್ಸವಗಳು ನಮ್ನನ್ನು ಒಂದಾಗಿಸುತ್ತದೆ. ಎಲ್ಲರನ್ನು ಒಳಗೊಳ್ಳುವ ಕೃಷ್ಣನನ್ನು ಮಾದರಿಯಾಗಿಸಿ, ನಾವೆಲ್ಲರೂ ಒಟ್ಟಾಗಬೇಕು ಎಂದು ಮಂಗಳೂರು ರಾಷ್ಟ್ರೋತ್ಥಾನ ವಿದ್ಯಾಕೇಂದ್ರದ ವಿಭಾಗ ಮುಖ್ಯಸ್ಥರಾದ ಡಾ.ಅರುಣ್ ಉಳ್ಳಾಲ್
ಹೇಳಿದರು.ವಿಶ್ವ ಹಿಂದೂ ಪರಿಷತ್, ಬಜರಂಗದಳ, ಮಾತೃಶಕ್ತಿ ದುರ್ಗಾವಾಹಿನಿ ಸುಳ್ಯ ಪ್ರಖಂಡ ಮತ್ತು ಮೊಸರು ಕುಡಿಕೆ ಉತ್ಸವ ಸಮಿತಿ ಸುಳ್ಯ ಇದರ ಆಶ್ರಯದಲ್ಲಿ ವಿಶ್ವ ಹಿಂದೂ ಪರಿಷತ್ನ ಸ್ಥಾಪನಾ ದಿನಾಚರಣೆಯ ಅಂಗವಾಗಿ ನಡೆದ
ಸುಳ್ಯ ಮೊಸರು ಕುಡಿಕೆ ಉತ್ಸವದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಅವರು ಧಾರ್ಮಿಕ ಉಪನ್ಯಾಸ ನೀಡಿದರು. ಕ್ರಾಂತಿಯ ಮಣ್ಣಾದ ಸುಳ್ಯದಲ್ಲಿ ನಡೆಯುವ ಮೊಸರು ಕುಡಿಕೆ ಉತ್ಸವಕ್ಕೆ ವಿಶೇಷ ಮಹತ್ವವಿದೆ ಎಂದ ಅವರು ವಿಶ್ವದ ವ್ಯಾಪ್ತಿಯನ್ನು ಹೊಂದಿರುವ ಶ್ರೀಕೃಷ್ಣನ ಕಲ್ಪನೆಯಂತೆ ವಿಶ್ವ ಹಿಂದೂ ಪರಿಷತ್ ಕಾರ್ಯನಿರ್ವಹಿಸುತಿದೆ ಎಂದು ಹೇಳಿದರು. ಸಂಘಟನೆಗಾಗಿ ದುಡಿಯುವ ಯುವಕರಿಗೆ ಪ್ರೋತ್ಸಾಹ ನೀಡಬೇಕು ಎಂದು ಅವರು ಹೇಳಿದರು.
ಸಭಾ ಕಾರ್ಯಕ್ರಮವನ್ನು ಉದ್ಘಾಟಸಿದ ಮರ್ಕಂಜ ಶ್ರೀ ಅನ್ನ ಪೂರ್ಣೇಶ್ವರಿ ಕ್ಷೇತ್ರದ ಧರ್ಮದರ್ಶಿಗಳಾದ ಔಘಡ್ ಪೀರ್ ಯೋಗಿ ರಾಜೇಶ್ನಾಥ್ ಜೀ ಮಾತನಾಡಿ ‘ಹಿಂದೂ ಸಂಘಟನೆಗಳು ಧರ್ಮಕ್ಕೆ ರಕ್ಷಾ ಕವಚವಾಗಿ ನಿಂತಿದೆ. ಸ್ವಚ್ಛ ಮನಸ್ಸಿನಿಂದ ಸಚ್ಚಾರಿತ್ರ್ಯದ ವ್ಯಕ್ತಿತ್ವದೊಂದಿಗೆ ಸಂಘಟನೆಗಳಲ್ಲಿ ತೊಡಗಿಸಿಕೊಂಡರೆ ವಿಶ್ವಮಾನ್ಯರಾಗುತ್ತಾರೆ ಎಂದು

ಹೇಳಿದರು. ಯಾರನ್ನೂ ನೋಯಿಸದೆ, ಯಾರನ್ನೂ ದ್ವೇಷಿಸದೆ ತಮ್ಮತನವನ್ನೂ, ಹಿಂದುತ್ವವನ್ನು ಕಾಪಾಡುವ ಕೆಲಸ ಆಗಬೇಕು ಎಂದ ಅವರು ಸಂಘಟನೆಯಲ್ಲಿ ತೊಡಗಿಸಿರುವ ಯುವಕರಿಗೆ ಹಿರಿಯರು ಬೆನ್ನೆಲುಬಾಗಿ ನಿಲ್ಲಬೇಕು ಎಂದು ಹೇಳಿದರು.
ಮೊಸರು ಕುಡಿಕೆ ಉತ್ಸವ ಸಮಿತಿ ಅಧ್ಯಕ್ಷ ಸತೀಶ್ ಕೆ.ಜಿ ಅಧ್ಯಕ್ಷತೆ ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ಜಿಲ್ಲಾ ಬಜರಂಗದಳ ಸಂಯೋಜಕರಾದ ನವೀನ್ ಮೂಡುಶೆಡ್ಡೆ, ಸಹ ಸಂಯೋಜಕ ಪ್ರವೀಣ್ ಕಲ್ಲೇಗ, ತಾಲೂಕು ಮೊಗೇರ ಸಂಘದ ಅಧ್ಯಕ್ಷ ಕರುಣಾಕರ ಪಿ.ಆರ್.ಪಲ್ಲತಡ್ಕ ಅತಿಥಿಗಳಾಗಿದ್ದರು.ವಿಶ್ವ ಹಿಂದೂ ಪರಿಷತ್ನ ಅಧ್ಯಕ್ಷ ಶ್ರೀಕಾಂತ್ ಗೋಳ್ವಾಲ್ಕರ್, ಸುಳ್ಯ ತಾಲೂಕು ಬಜರಂಗದಳ ಸಂಯೋಜಕ್ ಹರಿಪ್ರಸಾದ್ ಎಲಿಮಲೆ, ಮೊಸರು ಕುಡಿಕೆ ಉತ್ಸವ ಸಮಿತಿ ಕಾರ್ಯದರ್ಶಿ ವರ್ಷಿತ್ ಚೊಕ್ಕಾಡಿ, ಕೋಶಾಧಿಕಾರಿ ನವೀನ್ ಎಲಿಮಲೆ, ಉಪಾಧ್ಯಕ್ಷ ಪ್ರಶಾಂತ್ ಕಾಯರ್ತೋಡಿ, ಗೌರವ ಸಲಹೆಗಾರರಾದ ತೀರ್ಥಕುಮಾರ್ ಕುಂಚಡ್ಕ, ದುರ್ಗಾವಾಹಿನಿ ಸಂಚಾಲಕಿ ವಿಶಾಲ ಸೀತಾರಾಮ ವೇದಿಕೆಯಲ್ಲಿ ಉಪಸ್ತಿತರಿದ್ದರು.
ಈ ಸಂದರ್ಭದಲ್ಲಿ ದೈವ ನರ್ತಕರಾದ ರಾಜೇಶ್ ಪಣಿಕ್ಕರ್ ಮೇನಾಲ ಅವರನ್ನು ಸನ್ಮಾನಿಸಲಾಯಿತು.ಮೊಸರು ಕುಡಿಕೆ ಉತ್ಸವ ಸಮಿತಿ ಕಾರ್ಯದರ್ಶಿ ವರ್ಷಿತ್ ಚೊಕ್ಕಾಡಿ ಸ್ವಾಗತಿಸಿದರು.ವಿಶ್ವ ಹಿಂದೂ ಪರಿಷತ್ನ ಅಧ್ಯಕ್ಷ ಶ್ರೀಕಾಂತ್ ಗೋಳ್ವಾಲ್ಕರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಮೌಲ್ಯ ಡಿ.ಸಿ. ಪ್ರಾರ್ಥಿಸಿದರು.ಸುಳ್ಯ ತಾಲೂಕು ಬಜರಂಗದಳ ಸಂಯೋಜಕ್ ಹರಿಪ್ರಸಾದ್ ಎಲಿಮಲೆ ವಂದಿಸಿದರು. ಉಪನ್ಯಾಸಕಿ ಬೇಬಿ ವಿದ್ಯ ಪಿ.ಬಿ.ಕಾರ್ಯಕ್ರಮ ನಿರೂಪಿಸಿದರು.









