ಮಂಗಳೂರು: ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ವಂಚಿತ ಮಾಜಿ ಶಾಸಕ ಮೊಯ್ದಿನ್ ಬಾವ ಜೆಡಿಎಸ್ ಪಕ್ಷ ಸೇರಲು ನಿರ್ಧರಿಸಿದ್ದಾರೆ.
ತಾನು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿ ಜೆಡಿಎಸ್ ಸೇರಲಿದ್ದೇನೆ. ಮಂಗಳೂರು ನಗರ ಉತ್ತರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದೇನೆ ಎಂದು ಹೇಳಿದ್ದಾರೆ. ಭಾರೀ ಕುತೂಹಲ ಕೆರಳಿಸಿರುವ ಮಂಗಳೂರು ಉತ್ತರ ಕ್ಷೇತ್ರದಿಂದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಅವರಿಗೆ ಕಾಂಗ್ರೆಸ್ ಟಿಕೆಟ್ ಘೋಷಿಸಿದೆ. ಈ ಹಿನ್ನಲೆಯಲ್ಲಿ ಅಸಮಾಧಾನಗೊಂಡಿರುವ ಮೊಯ್ದೀನ್ ಬಾವಾ ಕಾಂಗ್ರೆಸ್ಗೆ ರಾಜಿನಾಮೆ ನೀಡಿ ಜೆಡಿಎಸ್ ಸೇರಲು ನಿರ್ಧರಿಸಿದ್ದಾರೆ.