ಸುಳ್ಯ:ಎಂ ಎನ್ ಸುರೇಶ್ (ಮೂಗ್ ಸುರೇಶ್ ) ನಿರ್ಮಾಣ ಹಾಗೂ ನಿರ್ದೇಶನದ ಚಿತ್ರ ‘ಕ್ಷಮೆಯಿರಲಿ ತಂದೆ’ಜೂನ್ 12ರಂದು ಸುಳ್ಯ ಸೇರಿ ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಸುಳ್ಯ ಭಾರತ್ ಸಿನಿಮಾ ಚಿತ್ರ ಮಂದಿರದಲ್ಲಿ ಮಧ್ಯಾಹ್ನ 2.30 ಹಾಗೂ ರಾತ್ರಿ 7.30ಕ್ಕೆ ಪ್ರದರ್ಶನ ಇರಲಿದೆ.ಸಿನಿಮಾದ ಪೋಸ್ಟರ್ ಬಿಡುಗಡೆ ಕಾರ್ಯಕ್ರಮ ಸುಳ್ಯದ
ವೆಂಕಟ್ರಮಣ ಸೊಸೈಟಿಯ ಸಭಾಂಗಣದಲ್ಲಿ ನಡೆಯಿತು. ಜೇನು ವ್ಯವಸಾಯಗಾರರ ಸಹಕಾರ ಸಂಘದ ಅಧ್ಯಕ್ಷ ಚಂದ್ರ ಕೋಲ್ಚಾರ್, ಗೌಡರ ಯುವ ಸೇವಾ ಸಂಘದ ಅಧ್ಯಕ್ಷ ಪಿ.ಎಸ್.ಗಂಗಾಧರ, ಎಂಜಿಎಂ ಪ್ರೌಢಶಾಲೆಯ ಸಂಚಾಲಕ ದೊಡ್ಡಣ್ಣ ಬರೆಮೇಲು,
ಶ್ರಿ ವೆಂಕಟ್ರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉಪಾಧ್ಯಕ್ಷ ದಿನೇಶ್ ಮಡಪ್ಪಾಡಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಟಿ.ವಿಶ್ವನಾಥ್,ಸಿನಿಮಾದ ಮಾರ್ಕೇಟಿಂಗ್ ವಿಭಾಗದ ಉಸ್ತುವಾರಿ ಸುಪ್ರೀತ್ ಮೋಂಟಡ್ಕ, ಜೆಸಿಐ ಸುಳ್ಯ ಪಯಸ್ವಿನಿ ಅಧ್ಯಕ್ಷೆ ಲತಾಶ್ರೀ ಸುಪ್ರೀತ್ ಮೋಂಟಡ್ಕ, ಸತ್ಯಶಾಂತಿ ತ್ಯಾಗಮೂರ್ತಿ ಉಪಸ್ಥಿತರಿದ್ದರು.














