ಪುತ್ತೂರು: ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಇಂದು ಪುತ್ತೂರಿಗೆ ಭೇಟಿ ನೀಡಿದ್ದು, ಈ ವೇಳೆ ಅವರು ಸ್ಥಳೀಯ ಸಾರ್ವಜನಿಕರ ಕುಂದು-ಕೊರತೆಗಳನ್ನು ಆಲಿಸಿದ್ದಾರೆ.ಪುತ್ತೂರಿನ ಐಬಿಯಲ್ಲಿ ಸಾರ್ವಜನಿಕರನ್ನು ಭೇಟಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ಈ ಭಾಗದ ನಾಗರಿಕರು ರಸ್ತೆ, ವಿವಿಧ ಅಭಿವೃದ್ಧಿ ಯೋಜನೆಗಳು ಸೇರಿದಂತೆ ಅನೇಕ ವಿಚಾರಗಳ ಬಗ್ಗೆ ಸ್ಪಂದಿಸುವಂತೆ ಮನವಿ ನೀಡಿದ್ದಾರೆ. ಈ ಬಗ್ಗೆ
ಪರಿಶೀಲಿಸಿದ ಸಂಸದರು, ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳುವುದಕ್ಕೆ ಪ್ರಯತ್ನಿಸುವುದಾಗಿ ಭರವಸೆ ನೀಡಿದ್ದಾರೆ.ಈ ನಡುವೆ, ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರವು ರೈತರಿಗಾಗಿ ಕಿಸಾನ್ ಸಮ್ಮಾನ್, ಸ್ವಾವಲಂಬಿ ವಿದ್ಯುತ್ ಬಳಕೆಗೆ ಪಿಎಂ ಸೂರ್ಯ ಘರ್ ಯೋಜನೆ, ಆರೋಗ್ಯ ಸಂರಕ್ಷಣೆಗೆ ಪಿಎಂ ಆಯುಷ್ಮಾನ್ ಹೀಗೆ ಹಲವು ಜನಪ್ರಿಯ ಯೋಜನೆಗಳನ್ನು ಪ್ರಾರಂಭಿಸಿದೆ. ಈ ಎಲ್ಲ ಕೇಂದ್ರ ಸರ್ಕಾರದ ಯೋಜನೆಗಳು ಫಲಾನುಭವಿಗಳನ್ನು ಪರಿಣಾಮಕಾರಿಯಾಗಿ ತಲುಪುತ್ತಿರುವ ವಿಚಾರಗಳ ಬಗ್ಗೆಯೂ ಸಂಸದರು ಇದೇ ಸಂದರ್ಭದಲ್ಲಿ ನಾಗರಿಕರಿಂದ ಮಾಹಿತಿ ಪಡೆದುಕೊಂಡರು.