ನವದೆಹಲಿ: ಕೇಂದ್ರ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆಯ ಸಚಿವರು, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರನ್ನು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ ಮಾಡಿ ಚರ್ಚೆ ನಡೆಸಿದರು.ದಕ್ಷಿಣ ಕನ್ನಡ ಜಿಲ್ಲೆಗೆ
ಭೇಟಿ ನೀಡುವಂತೆ ಸಚಿವರನ್ನು ಈ ಸಂದರ್ಭದಲ್ಲಿ ಸಂಸದರು ಆಹ್ವಾನಿಸಿದರು. ಕೆಐಓಸಿಎಲ್ ನ ಬೆಳವಣಿಗೆಯ ಸಾಮರ್ಥ್ಯವನ್ನು ಪರಿಗಣಿಸಿ, ಕೆಐಓಸಿಎಲ್ ಮಂಗಳೂರು ಸ್ಥಾವರದಲ್ಲಿ ಪೂರ್ಣ ಪ್ರಮಾಣದ ಕಾರ್ಯಚಟುವಟಿಕೆಗಳನ್ನು ಪುನರಾರಂಭಿಸಲು ಆಯ್ಕೆಗಳನ್ನು ಕಂಡುಕೊಳ್ಳುವಂತೆ ವಿನಂತಿಸುವುದರ ಜೊತೆಗೆ ಉದ್ಯೋಗ ಸೃಷ್ಟಿ ಮತ್ತು ಪ್ರಸ್ತುತ ಉದ್ಯೋಗಿಗಳ ಸುರಕ್ಷತೆಯ ಬಗ್ಗೆ ಕೂಡ ಈ ಸಂದರ್ಭದಲ್ಲಿ ಚರ್ಚೆ ನಡೆಸಿದರು.