ಜಾಲ್ಸೂರು:ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆಗೆ ಬುಧವಾರ ಭೇಟಿ ನೀಡಿ, ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ವಿದ್ಯಾರ್ಥಿ ಜೀವನವನ್ನು ಮೆಲುಕು ಹಾಕಿದರು.
ಪ್ರಥಮ ಬಾರಿಗೆ ಭೇಟಿ ನೀಡಿದ ಸಂಸದರನ್ನು ವಿದ್ಯಾರ್ಥಿಗಳು
ಬ್ಯಾಂಡ್ ವಾದ್ಯಗಳೊಂದಿಗೆ ಸ್ವಾಗತಿಸಿದರು. ಭೇಟಿಯ ನೆನಪಿಗಾಗಿ ಹಲಸಿನ ಗಿಡವನ್ನು ನೆಟ್ಟರು.ಬಳಿಕ ಶಾಲಾ ಅಭಿವೃದ್ಧಿ ಮತ್ತು ಶಾಲಾ ಜಾಗದ ಮಂಜೂರಾತಿ ಮಾಡಿಸುವಂತೆ ಪಯಸ್ವಿನಿ ಎಜ್ಯುಕೇಶನ್ ಸೊಸೈಟಿ ಅಧ್ಯಕ್ಷ ಅಡ್ಡಂತಡ್ಕ ದೇರಣ್ಣ ಗೌಡರು ಮನವಿ ಮಾಡಿದರು. ಇದೇ ವೇಳೆ ಅಧ್ಯಕ್ಷರು ಶಾಲು ಹೊದಿಸಿ ಗೌರವಿಸಿದರು. ಬಳಿಕ ಶಾಲಾ ಅಭಿವೃದ್ಧಿ ಬಗ್ಗೆ ಕೈಜೋಡಿಸುವುದಾಗಿ ಸಂಸದರು ಭರವಸೆ ನೀಡಿದರು.
ಮುಖಂಡರಾದ ರವೀಂದ್ರ ಶೆಟ್ಟಿ ಉಳಿದೊಟ್ಟು, ವೆಂಕಟ್ ವಳಲಂಬೆ, ಜಯರಾಮ ರೈ, ಬಾಬು ಕೆ.ಎಂ, ಹೇಮಂತ್ ಮಠ, ಶಾಲಾ ಮುಖ್ಯ ಶಿಕ್ಷಕಿ ಜಯಲತಾ ಕೆ.ಆರ್ , ಶಿಕ್ಷಕ ವೃಂದ ಇದ್ದರು.