ಮಂಗಳೂರು: ನಗರದ ಹೊರವಲಯದ ಎಂಆರ್ಪಿಎಲ್ನ ಸಿಎಚ್ಟಿ ಘಟಕದಲ್ಲಿ ಸ್ಪೋಟ ಸಂಭವಿಸಿದೆ. ಹೈಡ್ರೋ ಸಲ್ಫರ್ ಟ್ರೀಟ್ಮೆಂಟ್ ಯೂನಿಟ್ನಲ್ಲಿ ಸ್ಫೋಟ ಸಂಭವಿಸಿದ್ದು, ಬಳಿಕ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯನ್ನು ಈಗ ನಿಯಂತ್ರಣಕ್ಕೆ ತರಲಾಗಿದೆ.ಈ ಅವಘಡದಲ್ಲಿ ಪ್ರಾಥಮಿಕ ಮಾಹಿತಿಯಂತೆ
9 ಜನರಿಗೆ ಗಾಯಗಳಾಗಿವೆ ಎಂದು ವರದಿಯಾಗಿದೆ. ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಮಂಗಳೂರು ಪೊಲೀಸ್ ಕಮೀಷನರ್ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ. ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಪೊಲೀಸ್ ಕಮೀಷನರ್ ಜಿಲ್ಲಾ ಪಂಚಾಯತ್ ಸಿಇಓ ನರ್ವಡೆ ವಿನಾಯಕ್ ಕಾರ್ಭಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸ್ಫೋಟದ ತೀವ್ರತೆಗೆ ಸುತ್ತಮುತ್ತಲಿನ ಹಲವು ಮನೆಗಳು ಕಂಪಿಸಿದೆ. ಪ್ರದೇಶದ ಆಕಾಶದಲ್ಲಿ ದಟ್ಟ ಹೊಗೆ ಆವರಿಸಿತ್ತು.









