ಸುಳ್ಯ:ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದ ಮೈತಡ್ಕ ಎಂಬಲ್ಲಿ ಲೋಕೋಪಯೋಗಿ ಇಲಾಖೆಯಿಂದ ಪಯಸ್ವಿನಿ ನದಿಗೆ ಸೇತುವೆ ನಿರ್ಮಾಣಕ್ಕೆ ಈಗಾಗಲೇ ರೂ 10 ಕೋಟಿ ಮಂಜೂರಾಗಿ ಕಾಮಗಾರಿಯ ತಾಂತ್ರಿಕ ಪ್ರಕ್ರಿಯೆ ಪ್ರಾರಂಭಗೊಂಡಿದೆ.ಈ ಅಂದಾಜು ಪಟ್ಟಿಯ ಬಳಿಕ ಹೆಚ್ಚುವರಿಯಾಗಿ ಸೇತುವೆ ಮತ್ತು
ಸಂಪರ್ಕ ರಸ್ತೆಯ ಅಭಿವೃದ್ದಿ ಕಾಮಗಾರಿಗೆ ರೂ16.20 ಕೋಟಿ ಅಂದಾಜು ಪಟ್ಟಿ ಸಲ್ಲಿಸಲಾಗಿದೆ. ಹೆಚ್ಚುವರಿ ರೂ 6. 20 ಕೋಟಿ ಅನುದಾನ ಬಿಡುಗಡೆ ಮಾಡುವಂತೆ ಮನವಿಯನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಲ ಯು.ಟಿ ಖಾದರ್ ಫರೀದ್ ಅವರ ಶಿಪಾರಸ್ಸು ಪತ್ರದೊಂದಿಗೆ ಸೇತುವೆ ನಿರ್ಮಾಣಕ್ಕೆ ಪ್ರಯತ್ನಿಸಿದ ಸುಳ್ಯ ನಗರ ಪಂಚಾಯತ್ ಮಾಜಿ ಅಧ್ಯಕ್ಷ ಎಸ್.ಸಂಶುದ್ದೀನ್ ಅವರು ಲೋಕೋಪಯೋಗಿ
ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಸಲ್ಲಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು ಅನುದಾನ ಬಿಡುಗಡೆಗೆ ಭರವಸೆ ನೀಡಿ ಸದರಿ ಸೇತುವೆ ಶಿಲಾನ್ಯಾಸ ಕಾರ್ಯಕ್ರಮಕ್ಕೆ ಬರುವುದಾಗಿ ಒಪ್ಪಿಗೆಯನ್ನು ನೀಡಿರುತ್ತಾರೆ ಎಂದು ಸಂಶುದ್ದೀನ್ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಕೆ.ಗೋಕುಲ್ ದಾಸ್,ರಕ್ಷಿತ್ ದೊಡ್ಡಡ್ಕ ಹಾಗೂ ಗಾಂಧಿ ಅಡ್ಯಡ್ಕ ಉಪಸ್ತಿತರಿದ್ದರು.







