ಸುಳ್ಯ: ದ.ಕ. ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಮಹಮ್ಮದ್ ಕುಂಞಿ ಗೂನಡ್ಕ ರಾಜಿನಾಮೆ ನೀಡಿದ್ದಾರೆ.
ದ.ಕ.ಜಿಲ್ಲೆಯಲ್ಲಿ ಕೋಮು ವೈಷಮ್ಯ, ಸರಣಿ ಕೊಲೆ ಹೆಚ್ಚುತ್ತಿದ್ದು, ಬಂಟ್ವಾಳದ ಅಬ್ದುಲ್ ರಹ್ಮಾನ್ ಸೇರಿದಂತೆ ದ.ಕ ಜಿಲ್ಲೆಯಲ್ಲಿ
ನಿರಂತರವಾಗಿ ನಡೆಯುತ್ತಿರುವ ಸರಣಿ ಕೋಮು ಹತ್ಯೆಗಳನ್ನು ಮಟ್ಚ ಹಾಕಲು ವಿಫಲರಾದ ಆಡಳಿತ ವ್ಯವಸ್ಥೆಯ ವಿರುದ್ದ ಬೇಸತ್ತು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ರಾಜಿನಾಮೆ ನೀಡಿದ್ದೇನೆ ಎಂದು ಮಹಮ್ಮದ್ ಕುಂಞಿ ಗೂನಡ್ಕ ತಿಳಿಸಿದ್ದಾರೆ. ಘಟನೆಯ ಹಿನ್ನಲೆಯಲ್ಲಿ ಕಾಂಗ್ರೆಸ್ ಅಲ್ಪ ಸಂಖ್ಯಾತ ಮುಖಂಡರು ಸಾಮೂಹಿಕ ರಾಜಿನಾಮೆ ನೀಡುತ್ತಿದ್ದಾರೆ