ಮುಕ್ಕೂರು: ಮುಕ್ಕೂರು ವಾರ್ಡ್ ನಾಗರಿಕ ವೇದಿಕೆಯ ಆಶ್ರಯದಲ್ಲಿ ಕಾಶ್ಮೀರದ ಪಹಲ್ಗಾಮ್ ನಲ್ಲಿ ಭಾರತೀಯರ ಮೇಲೆ ನಡೆದ ಭಯೋತ್ಪಾದಕರ ದಾಳಿಯನ್ನು ಖಂಡಿಸಿ ಮುಕ್ಕೂರು ಬಸ್ ಪ್ರಯಾಣಿಕರ ತಂಗುದಾಣದ ಬಳಿ ರಾತ್ರಿ ಸಂತಾಪ ಸೂಚಕ ಮತ್ತು ಖಂಡನಾ ಸಭೆ ನಡೆಯಿತು. ಪ್ರಗತಿಪರ ಕೃಷಿಕ ರಾಮಚಂದ್ರ ಕೋಡಿಬೈಲು,
ಪೆರುವಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಜಗನ್ನಾಥ ಪೂಜಾರಿ ಮುಕ್ಕೂರು, ಪ್ರಗತಿಪರ ಕೃಷಿಕರಾದ
ಸುಬ್ರಾಯ ಭಟ್ ನೀರ್ಕಜೆ, ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದ ವ್ಯವಸ್ಥಾಪನ ಸಮಿತಿ ಮಾಜಿ ಅಧ್ಯಕ್ಷ ಉಮೇಶ್ ಕೆಎಂಬಿ ಮಾತನಾಡಿದರು. ಸಭೆಗೆ ಮುನ್ನ ಮುಕ್ಕೂರಿನ ರಸ್ತೆಯಲ್ಲಿ ತಿಬಿಲೆಯ ದೀಪದ ಬೆಳಕಿನೊಂದಿಗೆ ಮೌನ ಮೆರವಣಿಗೆ ನಡೆಯಿತು. ಭಾರತ ಮಾತೆಯ ಭಾವಚಿತ್ರಕ್ಕೆ ದೀಪ ಬೆಳಗಿಸಿ, ಒಂದು ನಿಮಿಷದ ಮೌನ ಪ್ರಾರ್ಥನೆಯ ಮೂಲಕ ಶ್ರದ್ಧಾಂಜಲಿ ಕೋರಲಾಯಿತು.
ಈ ಸಂದರ್ಭದಲ್ಲಿ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದ ವ್ಯವಸ್ಥಾಪನ ಸಮಿತಿ ಮಾಜಿ ಅಧ್ಯಕ್ಷ ಪದ್ಮನಾಭ ಶೆಟ್ಟಿ ಪೆರುವಾಜೆ, ಪ್ರಗತಿಪರ ಕೃಷಿಕರಾದ ಮೋಹನ ಬೈಪಡಿತ್ತಾಯ, ನರಸಿಂಹ ತೇಜಸ್ವಿ ಕಾನಾವು, ಗೋಪಾಲಕೃಷ್ಣ ಭಟ್ ಮನವಳಿಕೆ, ಉದ್ಯಮಿ ಚಂದ್ರಹಾಸ ರೈ ಮುಕ್ಕೂರು, ಸಂಜೀವ ಗೌಡ ಬೈಲಂಗಡಿ, ಸತ್ಯಪ್ರಸಾದ ಕಂಡಿಪ್ಪಾಡಿ, ಮಹಮ್ಮದ್ ಕೆ.ಎಚ್., ಕರುಣಾಕರ ಬೀರುಸಾಗು, ಗಿರೀಶ್ ಕಜೆ, ಮುಕ್ಕೂರು-ಕುಂಡಡ್ಕ ನೇಸರ ಯುವಕ ಮಂಡಲ ಅಧ್ಯಕ್ಷ ರಮೇಶ್ ಕಾನಾವು, ಕಾರ್ಯದರ್ಶಿ ರಾಮಚಂದ್ರ ಚೆನ್ನಾವರ, ಜ್ಯೋತಿ ಯುವಕ ಮಂಡಲ ಅಧ್ಯಕ್ಷ ದಿನೇಶ್ ಕಂರ್ಬುತ್ತೋಡಿ, ಶಾರದೋತ್ಸವ ಸಮಿತಿಯ ಲಿಂಗಪ್ಪ ಗೌಡ ಕುಂಡಡ್ಕ, ದಿವಾಕರ ಬೀರುಸಾಗು, ರೂಪಾನಂದ ಬೀರುಸಾಗು, ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಜಯಂತ ಕುಂಡಡ್ಕ, ರವಿ ಕುಂಡಡ್ಕ, ರಕ್ಷಿತ್ ಗೌಡ ಕಾನಾವು, ಯಶವಂತ ಕಾನಾವುಜಾಲು, ಪ್ರವೀಣ್ ಬೋಳಕುಮೇರು, ಮುಕ್ಕೂರು ಉಳ್ಳಾಲ್ತಿ ಭಕ್ತವೃಂದದ ತೇಜಸ್ವಿತ್ ಅಡ್ಯತಕಂಡ, ವಸಂತ ನಾಯ್ಕ, ಕಿಶನ್ ಅಡ್ಯತಕಂಡ, ಸುಳ್ಯ ಅಮರ ಸಂಘಟನ ಸಮಿತಿ ಅಧ್ಯಕ್ಷ ಕುಸುಮಾಧರ ಮುಕ್ಕೂರು, ವಿಠಲ ರೈ ಬೀರುಸಾಗು, ಚಂದ್ರಶೇಖರ ಕರ್ಪುತ್ತಾರು, ಲೋಕೇಶ್ ಬೀರುಸಾಗು, ಜಗದೀಶ್ ಬೊಮ್ಮಂತಗುಂಡಿ, ಯೂಸುಫ್ ಮುಕ್ಕೂರು, ಮೋಹನ್, ಅಹಮ್ಮದ್ ಕುಂಞಿ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು. ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದ ವ್ಯವಸ್ಥಾಪನ ಸಮಿತಿ ಮಾಜಿ ಸದಸ್ಯ ನಾರಾಯಣ ಕೊಂಡೆಪ್ಪಾಡಿ ನಿರೂಪಿಸಿದರು.





