ಮಂಗಳೂರು:ಮಂಗಳೂರಿನ ಉರ್ವಾ ಸ್ಟೋರಿನಲ್ಲಿರುವ ಸ್ವಸ್ತಿಕಾ ನ್ಯಾಷನಲ್ ಬಿಸಿನೆಸ್ ಸ್ಕೂಲಿನ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಮುಳಿಯ ಸಾತ್ವಿಕ್ ಆಯ್ಕೆಯಾಗಿದ್ದಾರೆ. ಗುತ್ತಿಗಾರಿನ ನಿವಾಸಿ ಆಗಿರುವ ಇವರು ಎಬಿವಿಪಿ ಇದರ ಬೆಂಬಲಿತ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು. ಬಿಕಾಂ ಮೂರನೇ ವರ್ಷದ ವಿದ್ಯಾರ್ಥಿಯಾದ ಇವರು ಕೇಂದ್ರ ಸರ್ಕಾರದ ರಬ್ಬರ್ ಬೋರ್ಡ್ನ ಸದಸ್ಯ ಮತ್ತು ಸುಳ್ಯ ತಾಲೂಕು ಪಂಚಾಯತಿನ ಮಾಜಿ ಅಧ್ಯಕ್ಷ ಮುಳಿಯ ಕೇಶವ ಭಟ್ ಮತ್ತು ಪಲ್ಲವಿ ಅವರ ಪುತ್ರ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.







