ಮುಂಬೈ: ಸೂರ್ಯಕುಮಾರ್ ಯಾದವ್ ಸ್ಪೋಟಕ ಇನ್ನೀಂಗ್ಸ್ ನೆರವಿನಿಂದ ಮುಂಬೈ ಇಂಡಿಯನ್ಸ್ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು 6 ವಿಕೆಟ್ಗಳಿಂದ ಮಣಿಸಿತು. ಗೆಲುವಿಗೆ 200 ರನ್ ಗುರಿ ಬೆನ್ನಟ್ಟಿದ ಮುಂಬೈ 16.3 ಓವರ್ಗಳಲ್ಲಿ 4 ವಿಕೆಟ್ ನಷ್ಟಕ್ಕೆ 200 ರನ್ ಗಳಿಸಿ ಗೆಲುವಿನ ನಗೆ ಬೀರಿತು. ಮುಂಬೈ ಪರ
ಸೂರ್ಯಕುಮಾರ್ ಯಾದವ್ 35 ಎಸೆತಗಳಲ್ಲಿ 7 ಬೌಂಡರಿ ಹಾಗು 6 ಭರ್ಜರಿ ಸಿಕ್ಸರ್ ನೆರವನಿಂದ 83 ರನ್ ಸಿಡಿಸಿದರು. ಇಸಾನ್ ಕಿಸಾನ್ 22 ಎಸೆತಗಳಲ್ಲಿ ತಲಾ 4 ಬೌಂಡರಿ ಮತ್ತು ಸಿಕ್ಸರ್ ನೆರವಿನಿಂದ 42 ರನ್ ಗಳಿಸಿದರು. ನೆಹಾಲ್ ವಧೇರಾ 34 ಎಸೆತಗಳಲ್ಲಿ 4 ಬೌಂಡರಿ 3 ಸಿಕ್ಸರ್ ನೆರವಿನಿಂದ ಅಜೇಯ 52 ರನ್ ಗಳಿಸಿದರು.
ಇದಕ್ಕೂ ಮುನ್ನ ಆರ್ಸಿಬಿ 20 ಓವರ್ಗಳಲ್ಲಿ 6 ವಿಕೆಟ್ ನಷ್ಟಕ್ಕೆ 199 ರನ್ ಗಳಿಸಿತು. ಆರ್ಸಿಬಿ ಪರ ಡುಪ್ಲೆಸಿಸ್(65 ರನ್, 41 ಎಸೆತ, 5 ಬೌಂಡರಿ, 3 ಸಿಕ್ಸರ್) ಹಾಗೂ ಮ್ಯಾಕ್ಸ್ವೆಲ್(68 ರನ್, 33 ಎಸೆತ, 8 ಬೌಂಡರಿ, 4 ಸಿಕ್ಸರ್)ಮೂರನೇ ವಿಕೆಟ್ಗೆ 120 ರನ್ ಜೊತೆಯಾಟ ನಡೆಸಿ ತಂಡವನ್ನು ಆಧರಿಸಿದರು.
ದಿನೇಶ್ ಕಾರ್ತಿಕ್(30 ರನ್, 18 ಎಸೆತ) ಹಾಗೂ ಕೇದಾರ್ ಜಾಧವ್(ಔಟಾಗದೆ 12, 10 ಎಸೆತ) 6ನೇ ವಿಕೆಟ್ಗೆ 39 ರನ್ ಸೇರಿಸಿ ತಂಡವನ್ನು ಉತ್ತಮ ಮೊತ್ತದತ್ತ ಮುನ್ನಡೆಸಿದರು. ವನಿಂದು ಹಸರಂಗ(12)ಔಟಾಗದೆ ಉಳಿದರು.