ಮುಂಬೈ: ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳ ಮಧ್ಯೆ ನಡೆಯುತ್ತಿರುವ ಐಪಿಎಲ್ ಪಂದ್ಯದಲ್ಲಿ ಮುಂಬೈ ತಂಡ ಡೆಲ್ಲಿಗೆ 235 ರನ್ಗಳ ಗೆಲುವಿನ ಗುರಿ ನೀಡಿದೆ. ಇಂದಿನ ಮೋದಲ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ 20 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 234 ರನ್ ಪೇರಿಸಿದೆ. ಮುಂಬೈ ಪರ
ರೋಹಿತ್ ಶರ್ಮ ಹಾಗೂ ಇಶಾನ್ ಕಿಸನ್ ಬಿರುಸಿನ ಆರಂಭ ನೀಡಿದರು. ಈ ಮೊದಲ ವಿಕೆಟ್ಗೆ 7 ಓವರ್ಗಳಲ್ಲಿ 80 ರನ್ ಪೇರಿಸಿದರು. ರೋಹಿತ್ 27 ಎಸೆತಗಳಲ್ಲಿ 6 ಬೌಂಡರಿ ಹಾಗೂ 3 ಸಿಕ್ಸರ್ ನೆರವಿನಿಂದ 49, ಕಿಶನ್ 24 ಎಸೆತಗಳಲ್ಲಿ 4 ಬೌಂಡರಿ ಹಾಗೂ 2 ಸಿಕ್ಸರ್ ನೆರವಿನಿಂದ 42, ಹಾರ್ದಿಕ್ ಪಾಂಡ್ಯ 33 ಎಸೆತಗಗಳಲ್ಲಿ 3 ಬೌಂಡರಿ ಹಾಗೂ 1 ಸಿಕ್ಸರ್ ನೆರವಿನಿಂದ 39, ಟಿಮ್ ಡೇವಿಡ್ 21 ಎಸೆತಗಳಲ್ಲಿ 2 ಬೌಂಡರಿ ಹಾಗೂ 4 ಸಿಕ್ಸರ್ ನೆರವಿನಿಂದ 45 ರನ್ ಬಾರಿಸಿದರು. ಕೊನೆಯಲ್ಲಿ ರೊಮಾರಿಯೋ ಶೆಫರ್ಡ್ ಅಕ್ಷರಷಃ ಸಿಡಿದರು. ಕೇವಲ 10 ಎಸೆತಗಳಲ್ಲಿ 4 ಸಿಕ್ಸರ್ ಮತ್ತು 3 ಬೌಂಡರಿ ನೆರವಿನಿಂದ ಅಜೇಯ 39 ರನ್ ಗಳಿಸಿಸರು. ಆನ್ರಿಚ್ ನೋರ್ಜೆ ಎಸೆದ ಕೊನೆಯ ಓವರ್ನಲ್ಲಿ 4 ಸಿಕ್ಸರ್ ಹಾಗೂ 2 ಬೌಂಡರಿ ಸಹೀತ 32 ರನ್ ಚಚ್ಚಿದ ಶೆಫರ್ಡ್ ಬೃಹತ್ ಮೊತ್ತ ಗಳಿಸಲು ನೆರವಾದರು.