ಮುಂಬೈ:ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟೂರ್ನಿಯಲ್ಲಿ ತಮ್ಮ ಮೂರನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ರಾಜಸ್ಥಾನ್ ರೋಯಲ್ಸ್ ವಿರುದ್ಧ ಅಲ್ಪ ಮೊತ್ತಕ್ಕೆ ಕುಸಿಸಿದೆ. ಮೊದಲು ಬ್ಯಾಟ್ ಮಾಡಿದ ಮುಂಬೈ 20 ಓವರ್ಗಳಲ್ಲಿ 9 ವಿಕೆಟ್ ನಷ್ಟಕ್ಕೆ 125 ರನ್ ಗಳಿಸಿದೆ. ಮುಂಬೈ ಪರ
ನಾಯಕ ಹಾರ್ದಿಕ್ ಪಾಂಡ್ಯ 34 ರನ್ ಗಳಿಸಿ ಟಾಪ್ ಸ್ಕೋರರ್ ಆದರು. ತಿಲಕ್ ವರ್ಮ 32 ರನ್ ಗಳಿಸಿದರು. ರಾಜಸ್ಥಾನ ಬೌಲರ್ಗಳ ಬಿಗು ದಾಳಿಗೆ ಮುಂಬೈ ಬ್ಯಾಟರ್ಗಳು ರನ್ ಗಳಿಸಲು ಪರದಾಡಿದರು. ರೋಯಲ್ಸ್ ಪರ ಟ್ರೆಂಟ್ ಬೋಲ್ಟ್ ಹಾಗೂ ಯೂಸವೇಂದ್ರ ಚಹಲ್ ತಲಾ 3 ವಿಕೆಟ್ ಪಡೆದರು. ಮೊದಲ ಎರಡು ಪಂದ್ಯಗಳಲ್ಲಿ ಸೋಲನುಭವಿಸಿರುವ ಮುಂಬೈಗೆ ಈ ಪಂದ್ಯದ ಗೆಲುವು ಅನಿವಾರ್ಯವಾಗಿದೆ.ಗಾಯಗೊಂಡಿರುವ ಸೂರ್ಯಕುಮಾರ್ ಯಾದವ್ ಅವರ ಗೈರುಹಾಜರಿಯೂ ಮುಂಬೈ ತಂಡವನ್ನು ಕಾಡುತ್ತಿದೆ.