ಬೆಂಗಳೂರು:ರಾಜ್ಯದಲ್ಲಿ ಮುಂಗಾರು ದುರ್ಬಲಗೊ ಅಲ್ಲಲ್ಲಿ ಸಾಧಾರಣ ಮಳೆಯಾಗುತ್ತಿದೆ. ದಿನಕ್ಕೆ ಒಂದೋ ಎರಡೋ ಬಾರಿ ಮಳೆ ಸುರಿಯುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲಿ ಮುಂಗಾರು ಚುರುಕುಗೊಳ್ಳುವ ಸಾಧ್ಯತೆ ಇದೆ ಎಂದು
ಹವಾಮಾನ ಇಲಾಖೆ ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ,ಕರಾವಳಿಯ ಕೆಲವು ಕಡೆಗಳಲ್ಲಿ ಆ.17ರ ವರೆಗೆ ಮಳೆಯಾಗುವ ಸಾಧ್ಯತೆ ಇದೆ.ಕೆಲವೆಡೆ ಉತ್ತಮ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮತ್ತು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆ-ಗುಡುಗು ಸಹಿತ ಮಲೆಯಾಗುವ ಸಾಧ್ಯತೆ ಇದೆ. ಒಳನಾಡಿನ ಒಂದೆರಡು ಕಡೆಗಳಲ್ಲಿ ಮಿಂಚು ಸಹಿತ ಗುಡುಗಿನಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಸೂಚನೆ ನೀಡಿದೆ.