ಮುಪ್ಪೇರ್ಯ:ಸುಳ್ಯ ತಾಲೂಕಿನ ಮುಪ್ಪೇರ್ಯ ಗ್ರಾಮದ ಮರುವಂಜ ಮುಗುಪ್ಪು ಕೊರಗಜ್ಜ ಕ್ಷೇತ್ರ ಸಾನಿಧ್ಯದಲ್ಲಿ ವಿಶೇಷ ಸಂಕ್ರಮಣ ಪೂಜೆ ಹಾಗೂ ಅಗೇಲು ಸೇವೆ ನಡೆಯಿತು. ಈ ಸಂದರ್ಭದಲ್ಲಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಪ್ರವೀಣ ಪ್ರಶಾಂತ್ ಮರುವಂಜ ಅವರನ್ನು ಶಾಲು ಹೊದಿಸಿ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಜಾತ್ರೋತ್ಸವದ ಆಮಂತ್ರಣ ಪತ್ರಿಕೆಯನ್ನು ಸಾನ್ನಿಧ್ಯದಲ್ಲಿ ಅರ್ಪಿಸಿ ಬಳಿಕ ಭಕ್ತರಿಗೆ ವಿತರಿಸಲಾಯಿತು. ಈ ಸಂದರ್ಭದಲ್ಲಿ ಕ್ಷೇತ್ರದ ಪ್ರಮುಖರು ಹಾಗೂ ಭಕ್ತರು ಉಪಸ್ಥಿತರಿದ್ದರು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.





