ಸುಳ್ಯ: ಸುಳ್ಯ ಬೀರಮಂಗಲದ ಬಾಡಿಗೆ ಮನೆಯೊಂದರಲ್ಲಿ ಯುವತಿಯ ಮೃತದೇಹ ಗೋಣಿ ಚೀಲದಲ್ಲಿ ತುಂಬಿಟ್ಟಿರುವ ನೆಲೆಯಲ್ಲಿ ಪತ್ತೆಯಾಗಿದೆ. ಸುಳ್ಯದ ಹೊಟೆಲೊಂದರಲ್ಲಿ ಕೆಲಸ ಮಾಡುತ್ತಿದ್ದ ಪಶ್ಚಿಮ ಬಂಗಾಲದ ಮೂಲದ ಇಮ್ರಾನ್ ಎಂದು ಹೇಳಲಾಗಿರುವಾತ ಈ ಕೊಠಡಿಯಲ್ಲಿ ಕಳೆದ ಕೆಲವು ತಿಂಗಳಿನಿಂದ ಬಾಡಿಗೆ ಮನೆಯಲ್ಲಿ ವಾಸವಿದ್ದ ಎಂದು ಹೇಳಲಾಗಿದ್ದು ಈತ ತನ್ನ ಪತ್ನಿಯನ್ನು ಕೊಲೆ ಮಾಡಿ ಗೋಣಿಚೀಲದಲ್ಲಿ
ತುಂಬಿಸಿ ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ. ಇಮ್ರಾನ್ ಕಳೆದ ಕೆಲವು ತಿಂಗಳಿನಿಂದ ಬೀರಮಂಗಲ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಎರಡು ದಿನಗಳಿಂದ ಹಿಂದೆ ಊರಿಗೆ ತೆರಳುತ್ತೇನೆ ಎಂದು ಹೊಟೇಲ್ ನವರಲ್ಲಿ ಹೇಳಿ ಊರಿಗೆ ತೆರಳಿದ್ದ ಎಂದು ಹೇಳಲಾಗಿದೆ. ಇವತ್ತು ಸಮೀಪದ ರೂಂ ನವರಿಗೆ ಸಂಶಯ ಮೂಡಿ ಅವರು ಹೊಟೇಲ್ ಮಾಲೀಕರಿಗೆ ತಿಳಿಸಿ ಹೊಟೇಲ್ ಮಾಲಕರು ಪೋಲಿಸರಿಗೆ ವಿಷಯ ತಿಳಿಸಿ ಪೊಲೀಸರು ಇಂದು ಸಂಜೆ ಬಾಡಿಗೆ ಮನೆಗೆ ಬಂದು ಪರಿಶೀಲಿಸುವಾಗ ಮನೆಯೊಳಗೆ ಗೋಣಿ ಚೀಲದಲ್ಲಿ ತುಂಬಿದ ನೆಲೆಯಲ್ಲಿ ಮೃತದೇಹ ಪತ್ತೆಯಾಗಿದೆ.
ಸುಳ್ಯ ಪೋಲಿಸರು ಸ್ಥಳ ಪರಿಶೀಲಿಸಿ ತನಿಖೆ ನಡೆಸುತ್ತಿದ್ದಾರೆ. ಡಿವೈಎಸ್‌ಪಿ ವೀರಯ್ಯ ಹಿರೇಮಠ್, ಸುಳ್ಯ ವೃತ್ತ ನಿರೀಕ್ಷಕ ನವೀನ್‌ಚಂದ್ರ ಜೋಗಿ, ಎಸ್ಐ ದಿಲೀಪ್ ಜಿ.ಆರ್ ಮತ್ತಿತರರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ. ಬೆರಳಚ್ಚು ತಜ್ಞರು, ಫೋರೆನ್ಸಿಕ್ ತಜ್ಞರು ಸ್ಥಳಕ್ಕೆ ಆಗಮಿಸಲಿದ್ದಾರೆ ಎಂದು ತಿಳಿದು ಬಂದಿದೆ.