ಸುಳ್ಯ:ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಂಗ ಸಂಸ್ಥೆಯಾದ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಸುಳ್ಯ ತಾಲೂಕು ಅಧ್ಯಕ್ಷರಾಗಿ ಎಂ.ವೆಂಕಪ್ಪ ಗೌಡ ಆಯ್ಕೆಯಾಗಿದ್ದಾರೆ.
ಸುಳ್ಯ ಯೋಜನಾ ಕಚೇರಿ ಸಭಾಂಗಣದಲ್ಲಿ ತಾಲೂಕು ಅಧ್ಯಕ್ಷರಾದ ಲೋಕನಾಥ್ ಅಮೆಚೂರ್ ಅಧ್ಯಕ್ಷತೆಯಲ್ಲಿ ನಡೆದ ಪದಾಧಿಕಾರಿಗಳ ಸಭೆಯಲ್ಲಿ ನೂತನ
ಅಧ್ಯಕ್ಷರ ಆಯ್ಕೆ ನಡೆಯಿತು.ಸಭೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷ ಪದ್ಮನಾಭ ಶೆಟ್ಟಿ ದೀಪ ಬೆಳಗಿಸಿ ಉದ್ಘಾಟಿಸಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ದ.ಕ ಜಿಲ್ಲಾ
ನಿರ್ದೇಶಕ ಬಾಬು ನಾಯ್ಕ ಮಾತನಾಡಿದರು.ಜನಜಾಗೃತಿ ವಿಭಾಗದ ಪ್ರಾದೇಶಿಕ ಯೋಜನಾಧಿಕಾರಿ ಗಣೇಶ್ ಆಚಾರ್ಯ ಕ್ರಿಯಾ ಯೋಜನೆಯ ಗುರಿ ಸಾಧನೆ ಕುರಿತು ಮಾಹಿತಿ ನೀಡಿದರು. ಸುಳ್ಯ ಯೋಜನಾ ಕಚೇರಿ ವ್ಯಾಪ್ತಿಯ ವಲಯವಾರು ಸಾಧನ ವರದಿಯನ್ನು ಮಂಡಿಸಲಾಯಿತು.
ಸಭೆಯಲ್ಲಿ ಜನಜಾಗೃತಿ ವೇದಿಕೆಯ ಮಾಜಿ ಜಿಲ್ಲಾಧ್ಯಕ್ಷ ಎನ್.ಎ.ರಾಮಚಂದ್ರ, ಜನಜಾಗೃತಿ ವೇದಿಕೆಯ ಮಾಜಿ ತಾಲೂಕು ಅಧ್ಯಕ್ಷರಾದ ಮಹೇಶ್ ಕುಮಾರ್ ಮೇನಾಲ,ವಿಮಲ ರಂಗಯ್ಯ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು. ಸುಳ್ಯ ಯೋಜನಾಧಿಕಾರಿ ಮಾಧವ ಗೌಡ ಸ್ವಾಗತಿಸಿ ವರದಿ ಮಂಡಿಸಿದರು.ಮೇಲ್ವಿಚಾರಕರಾದ ಸವಿತಾ ಕಾರ್ಯಕ್ರಮ ನಿರೂಪಿಸಿ, ಹರೀಶ್ ಆಚಾರ್ಯ ವಂದಿಸಿದರು.













