ಸುಳ್ಯ:ಅಂಬೇಡ್ಕರ್ ಬಗ್ಗೆ ಕೇಂದ್ರ ಸಚಿವ ಅಮಿತ್ ಷಾ ಹಾಗೂ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕುರಿತು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರ ಆಕ್ಷೇಪಾರ್ಹ ಹೇಳಿಕೆಗಳು ಖಂಡನೀಯ ಎಂದು ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಎಂ.ವೆಂಕಪ್ಪ ಗೌಡ ಹೇಳಿದ್ದಾರೆ. ಸುಳ್ಯ ಪ್ರೆಸ್ ಕ್ಲಬ್ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಅಧಿಕಾರದ ಅಹಂನಿಂದ ಬಿಜೆಪಿಯವರು ರೀತಿ ಮಾತನಾಡುತ್ತಾರೆ.ರಾಹುಲ್ ಗಾಂಧಿ ಬಗ್ಗೆ
ಬಿಜೆಪಿಯವರಿಗೆ ಭಯ ಉಂಟಾಗಿದೆ. ಅದಕ್ಕೆ ರಾಹುಲ್ ಗಾಂಧಿ ಬಗ್ಗೆ ಆರೋಪ ಮಾಡುತ್ತಾರೆ. ಮಹಿಳಾ ಸಚಿವೆಯ ಬಗ್ಗೆ ಸಿ.ಟಿ.ರವಿ ಹೇಳಿಕೆ ತೀರಾ ಖಂಡನೀಯವಾದುದು ಕೆಲವು ಬಿಜೆಪಿ ಮುಖಂಡರ ಹೇಳಿಕೆ ಮಿತಿ ಮೀರಿದೆ ಎಂದು ಹೇಳಿದರು. ನಗರ ಪಂಚಾಯತ್ ಆಡಳಿತ ಇನ್ನೂ ಟೇಕ್ ಆಫ್ ಆಗಿಲ್ಲ.ಯಾವುದೇ ಕೆಲಸಗಳು ಸಮರ್ಪಕವಾಗಿ ನಡೆಯುತ್ತಿಲ್ಲ ರಸ್ತೆ ಅಲ್ಲಲ್ಲಿ ಅಗೆದು ಹಾಕಿದ್ದು ಧೂಳುಮಯವಾಗಿದೆ. ನೀರು ಹಾಕಿ ಧೂಳು ಕಡಿಮೆ ಮಾಡಬೇಕು. ಜೊತೆಗೆ ರಸ್ತೆಗಳನ್ನು ಸುಸ್ಥಿತಿಯಲ್ಲಿಡುವ ಕೆಲಸ ಆಗಬೇಕು ಎಂದರು.
ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ಕೋಲ್ಚಾರ್ ಮಾತನಾಡಿ ‘ರಾಜ್ಯದ ಮಹಿಳೆಯರ ಅಭಿವೃದ್ಧಿಗೆ ಶ್ರಮಿಸುತ್ತಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕುರಿತು ಆಕ್ಷೇಪಾರ್ಹ ಪದ ಬಳಕೆ ಮಾಡಿರುವುದು ಖಂಡನೀಯ. ಪ್ರಜಾಪ್ರಭುತ್ವದ ದೇಗುಲದಲ್ಲಿ ಈ ರೀತಿ ಮಾತನಾಡಿರುವುದು ಅಕ್ಷಮ್ಯ ಎಂದು ಹೇಳಿದರು.
ನಗರ ಪಂಚಾಯತ್ ಸದಸ್ಯ ಕೆ.ಎಸ್. ಉಮ್ಮರ್ ಮಾತನಾಡಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಬಗ್ಗೆ, ಮಹಿಳಾ ಸಚಿವರ ಬಗ್ಗೆ ಆಕ್ಷೇಪಾರ್ಹವಾಗಿ ಮಾತನಾಡಿರುವುದು ಖಂಡನೀಯ ಮುಂದೆ ಈ ರೀತಿ ಆಗಬಾರದು ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ನ.ಪಂ.ಸದಸ್ಯರಾದ ಶರೀಪ್ ಕಂಠಿ, ಡೇವಿಡ್ ಧೀರಾ ಕ್ರಾಸ್ತಾ, ಭಾಸ್ಕರ ಪೂಜಾರಿ, ಭವಾನಿಂಕರ ಕಲ್ಮಡ್ಕ ಉಪಸ್ಥಿತರಿದ್ದರು.