ಸುಳ್ಯ:ಬಿಜೆಪಿ ವತಿಯಿಂದ ನಡೆಯುತ್ತಿರುವ ಮೈಸೂರು ಚಲೋ ಪಾದಯಾತ್ರೆಗೆ ಸುಳ್ಯ ವಿಧಾನಸಭಾ ಕ್ಷೇತ್ರದಿಂದ 500 ಮಂದಿ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ತಿಳಿಸಿದ್ದಾರೆ. ಪಾದಯಾತ್ರೆಯ 5ನೇ ದಿನವಾದ
ಆ.7ರಂದು ಸುಳ್ಯ ಮಂಡಲದ ವಿವಿಧ ಸ್ಥರದ ಕಾರ್ಯಕರ್ತರು ಪಾದಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ. ಕರ್ನಾಟಕದ ಕಾಂಗ್ರೆಸ್ ನ ಸಿದ್ದರಾಮಯ್ಯ ನೇತೃತ್ವದ ಸರಕಾರ ಅಧಿಕಾರಕ್ಕೆ ಬಂದು 13 ತಿಂಗಳಾದರೂ ಯಾವುದೇ ಅಭಿವೃದ್ಧಿ ಕೆಲಸಗಳನ್ನು ನಡೆಸದೇ ಮತದಾರರಿಗೆ ನೀಡಿದ ಪ್ರತಿಯೊಂದು ಭರವಸೆಗಳಿಗೆ ಅನ್ಯಾಯವೆಸಗುತ್ತಿದ್ದು ಕೃಷಿಕರ ಪಂಪ್ ಸೆಟ್ ಗಳಿಗೆ ನೀಡಿರುವ ಸಹಾಯ ರದ್ದುಮಾಡಿ ಡಿಸೇಲ್, ಪೆಟ್ರೋಲ್ ಬೆಲೆ ಏರಿಕೆ ಮಾಡಿ, ಜನಸಾಮಾನ್ಯರ ಗೃಹೋಪಯೋಗಿ ಸಾಮಾಗ್ರಿಗಳ ಬೆಲೆ ದುಪ್ಪಟ್ಟು ಮಾಡಿದೆ.ರಾಜ್ಯದ ಜನತೆಗೆ ಆಗಿರುವ ಅನ್ಯಾಯದ ವಿರುದ್ಧ, ಭ್ರಷ್ಟಾಚಾರದ ವಿರುದ್ಧ ಈ ಪಾದಯಾತ್ರೆ ಆರಂಭವಾಗಿದ್ದು ಜನತೆಗೆ ನ್ಯಾಯ ಒದಗಿಸುವ ತನಕ ನಮ್ಮ ಹೋರಾಟ ನಡೆಯಲಿದೆ.ಎಂದು ವೆಂಕಟ್ ವಳಲಂಬೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.