ಮೈಸೂರು:ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವಕ್ಕೆ ಅ.15 ರಂದು ಸಂಗೀತ ನಿರ್ದೇಶಕ ಹಂಸಲೇಖ ಅವರು ಚಾಲನೆ ನೀಡಲಿದ್ದಾರೆ.
ಮೈಸೂರಿನ ಚಾಮುಂಡಿಬೆಟ್ಟದಲ್ಲಿ ನಾಳೆ ಬೆಳಗ್ಗೆ 10.15 ರಿಂದ 10.35ರ ವೃಶ್ಚಿಕ ಲಗ್ನದಲ್ಲಿ ಹಂಸಲೇಖ ಅವರು ದಸರಾ ಮಹೋತ್ಸವಕ್ಕೆ ವಿಧ್ಯುಕ್ತ
ಚಾಲನೆ ನೀಡಲಿದ್ದಾರೆ. ನಾಡ ದೇವತೆ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಚಾಲನೆ ನೀಡಲಿದ್ದಾರೆ. ವಿಶ್ವ ವಿಖ್ಯಾತ ದಸರಾಗೆ ಮೈಸೂರು ಜಿಲ್ಲಾಡಳಿತ ಭರ್ಜರಿ ಸಿದ್ಧತೆ ಮಾಡಿಕೊಂಡಿದೆ.
ಸಾಂಸ್ಕೃತಿಕ ಕಾರ್ಯಕ್ರಮಗಳು, ಚಲನಚಿತ್ರೋತ್ಸವ, ರೈತರ ದಸರಾ, ಯುವ ದಸರಾ ನಡೆಯಲಿದೆ. ಅ.24ರಂದು ವಿಶ್ವ ವಿಖ್ಯಾತ ಜಂಬೂ ಸವಾರಿ ನಡೆಯಲಿದೆ.