ಮೈಸೂರು:ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ-2026ಕ್ಕೆ ದಿನಾಂಕ ಮತ್ತು ಶುಭ ಮುಹೂರ್ತಗಳನ್ನು ಅಧಿಕೃತವಾಗಿ ನಿಗದಿಪಡಿಸಲಾಗಿದ್ದು, ದಸರಾ ಸಿದ್ಧತೆಗಳಿಗೆ ಚಾಲನೆ ದೊರೆತಿದೆ. ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ
ಅಕ್ಟೋಬರ್ 11ರ ಭಾನುವಾರ ಮುಂಜಾನೆ ಚಾಲನೆ ದೊರೆಯಲಿದೆ. ಸಂಪ್ರದಾಯದಂತೆ ಚಾಮುಂಡಿ ಬೆಟ್ಟದಲ್ಲಿ ದಸರಾ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ.ದಸರಾ ಮಹೋತ್ಸವದ ಅತ್ಯಂತ ಪ್ರಮುಖ ಕಾರ್ಯಕ್ರಮವಾದ ವಿಜಯದಶಮಿ ಜಂಬೂಸವಾರಿ ಅಕ್ಟೋಬರ್ 21ರಂದು ನಡೆಯಲಿದೆ. ಸಾಂಪ್ರದಾಯಿಕ ಶುಭ ಮುಹೂರ್ತದಂತೆ ಅಂದು ಸಂಜೆ 4.10 ಗಂಟೆಗೆ ಮೀನಾ ಲಗ್ನದಲ್ಲಿ ಮುಖ್ಯಮಂತ್ರಿ ಜಂಬೂಸವಾರಿಗೆ ಪುಷ್ಪಾರ್ಚನೆ ಸಲ್ಲಿಸಲಿದ್ದಾರೆ. ಬಳಿಕ ಜಂಬೂಸವಾರಿ ನಡೆಯಲಿದೆ.







































