ಮೈಸೂರು:ನಾಡಹಬ್ಬ ಮೈಸೂರು ದಸರಾಕ್ಕೆ ಅದ್ದೂರಿ ಚಾಲನೆ ದೊರೆತಿದೆ.
ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಅಂತರರಾಷ್ಟ್ರೀಯ ‘ಬುಕರ್’ ಪ್ರಶಸ್ತಿ ಪುರಸ್ಕೃತರಾದ ಬಾನು ಮುಸ್ತಾಕ್ ಅವರು ಚಾಮುಂಡೇಶ್ವರಿ ಉತ್ಸವಮೂರ್ತಿಗೆ ಪುಷ್ಪ ಸಮರ್ಪಿಸಿ ದೀಪ ಬೆಳಗುವ ಮೂಲಕ ದಸರಾ ಮಹೋತ್ಸವಕ್ಕೆ ಚಾಲನೆ ನೀಡಿದರು. ‘ದಸರೆ ಎಂದರೆ ಹಬ್ಬವಷ್ಟೇ ಅಲ್ಲ. ನಾಡಿನ
ನಾಡಿ ಮಿಡಿತ, ಸಂಸ್ಕೃತಿಯ ಉತ್ಸವ. ಇದು ಎಲ್ಲರನ್ನೂ ಒಳಗೊಳ್ಳುವ ಘಳಿಗೆ. ಸಮನ್ವಯ ಮೇಳ. ವಿವಿಧತೆಯಲ್ಲಿ ಏಕತೆ ಇರುವ ಸುಗಂಧ’ ಎಂದು ಅವರು ಬಣ್ಣಿಸಿದರು. ನಮ್ಮ ಸಂಸ್ಕೃತಿಯು ಹೃದಯಗಳನ್ನು ಒಂದುಗೂಡಿಸುವಂಥದ್ದು, ದ್ವೇಷಗಳನ್ನು ಬೆಳೆಸುವಂಥದ್ದಲ್ಲ, ಪ್ರೀತಿಯನ್ನು ಹರಡುವಂಥದ್ದು ಎಂದು ಪ್ರತಿಪಾದಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ, ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಸಚಿವರಾದ ಕೆ.ಎಚ್.ಮುನಿಯಪ್ಪ, ಶಿವರಾಜ ತಂಗಡಗಿ, ಎಚ್.ಕೆ.ಪಾಟೀಲ, ಕೆ.ವೆಂಕಟೇಶ್, ಶಾಸಕರಾದ ಡಿ.ರವಿಶಂಕರ್, ಜಿ.ಡಿ.ಹರೀಶ್ ಗೌಡ, ಟಿ.ಎಸ್.ಶ್ರೀವತ್ಸ, ಡಾ.ಡಿ.ತಿಮ್ಮಯ್ಯ, ದರ್ಶನ್ ಧ್ರುವನಾರಾಯಣ, ಅನಿಲ್ ಚಿಕ್ಕಮಾದು, ಎ.ಆರ್.ಕೃಷ್ಣ ಮೂರ್ತಿ, ರಮೇಶ್ ಬಂಡಿಸಿದ್ದೇಗೌಡ, ಕೆ.ಹರೀಶ್ ಗೌಡ, ತನ್ವೀರ್ ಸೇಠ್, ಸಿ.ಎನ್.ಮಂಜೇಗೌಡ, ಕೆ.ಶಿವಕುಮಾರ್, ಕೆ.ವಿವೇಕಾನಂದ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷೆ ಪುಷ್ಪಾ ಅಮರನಾಥ್ ಸೇರಿ ಪ್ರಮುಖರು ಉಪಸ್ಥಿತರಿದ್ದರು.





