ಮೈಸೂರು: ಮೈಸೂರು ದಸರಾದ ಪ್ರಮುಖ ಆಕರ್ಷಣೆ ವಿಜಯದಶಮಿ ದಿನದಂದು ನಡೆಯುವ ವಿಶ್ವ ವಿಖ್ಯಾತ ಜಂಬೂ ಸವಾರಿಗೆ ಲಕ್ಷಾಂತರ ಮಂದಿ ಸಾಕ್ಷಿಯಾದರು. ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಇತರ ಗಣ್ಯರು
ಜಂಬೂ ಸವಾರಿಗೆ ಚಾಲನೆ ನೀಡಿದರು.750 ಕೆಜಿ ತೂಕದ ಚಿನ್ನದ ಅಂಬಾರಿಯಲ್ಲಿ ಚಾಮುಂಡೇಶ್ವರಿ ದೇವಿಯ ಹೊತ್ತ ಅಭಿಮನ್ಯು ಆನೆ ಹಾಗೂ ಇತರ ಆನೆಗಳು ಜಂಬೂ ಸವಾರಿಯಲ್ಲಿ ಭಾಗವಹಿಸಿದವು.
ಇದಕ್ಕೂ ಮುನ್ಬ ನಂದಿ ಧ್ವಜಕ್ಕೆ ಮುಖ್ಯಮಂತ್ರಿಗಳು ಪೂಜೆ ಸಲ್ಲಿಸಿದ ಬಳಿಕ ಸ್ತಬ್ದಚಿತ್ರ ಮತ್ತು ಕಲಾತಂಡಗಳ ಮೆರವಣಿಗೆ ಆರಂಭವಾಯಿತು.
ಮೆರವಣಿಗೆ ಅರಮನೆಯಿಂದ ಹೊರಟು ಕೆ.ಆರ್.ವೃತ್ತ, ಸಯ್ಯಾಜಿ ರಾವ್ ರಸ್ತೆ, ಆರ್ಯುವೇದ ಕಾಲೇಜು ವೃತ್ತ. ಬಂಬೂ ಬಜಾರ್ ರಸ್ತೆ, ಹೈವೆ ಸರ್ಕಲ್, ಮೂಲಕ ಹಾದು ಬನ್ನಿ ಮಂಟಪದವರಗೆ 5 ಕಿ.ಮಿ ಸಾಗಿ ಬಂದಿತು. ರಾಜ್ಯದ ಸಂಸ್ಕೃತಿ ಬಿಂಬಿಸುವ 49 ಸ್ತಬ್ಧಚಿತ್ರಗಳು, 95 ಕಲಾತಂಡಗಳು ಮೆರವಣಿಗೆಯ ಮೆರುಗನ್ನು ಹೆಚ್ಚಿಸಿದವು.