ಮೈಸೂರು: ಮೈಸೂರು ಜಿಲ್ಲೆಯ ತಿ.ನರಸಿಪುರ ಕುರುಬೂರು ಗ್ರಾಮದ ಬಳಿ ಕಾರು ಮತ್ತು ಖಾಸಗಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿ, 10 ಮಂದಿ ಸಾವಿಗೀಡಾಗಿದ್ದಾರೆ. ಮೂವರು ತೀವ್ರವಾಗಿ ಗಾಯಗೊಂಡಿದ್ದಾರೆ. ಮೃತರನ್ನು ಬಳ್ಳಾರಿ ಜಿಲ್ಲೆಯವರು ಎಂದು
ಹೇಳಲಾಗಿದೆ. ಮಹದೇಶ್ವರ ಬೆಟ್ಟಕ್ಕೆ ಬಂದಿದ್ದ ಇನೋವಾ ಕಾರು ಮತ್ತು ಖಾಸಗೀ ಬಸ್ ಮಧ್ಯೆ ಅಪಘಾತ ಸಂಭವಿಸಿದೆ. ಕಾರು ನಜ್ಜುಗುಜ್ಜಾಗಿದೆ. ಮೈಸೂರು – ಕೊಳ್ಳೇಗಾಲ ರಾಷ್ಟ್ರೀಯ ಹೆದ್ದಾರಿಯ ಕುರುಬೂರು ಬಳಿ ಘಟನೆ ನಡೆದಿದೆ. ಕಾರಿನಲ್ಲಿದ್ದವರು ಬಳ್ಳಾರಿಯಿಂದ ಮೈಸೂರಿಗೆ ಪ್ರವಾಸ ಬಂಸವರು ಎಂದು ಹೇಳಲಾಗಿದೆ. ಸ್ಥಳೀಯರ ನೆರವಿನಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತಿದೆ. ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದಾರೆ.