ಸುಳ್ಯ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿ. ಎಂ. ಶಹೀದ್ ತೆಕ್ಕಿಲ್ ಅವರಿಗೆ ಸುಳ್ಯದಲ್ಲಿ ಏರ್ಪಡಿಸಿದ ಸಾರ್ವಜನಿಕ ಸನ್ಮಾನ ಸಮಾರಂಭದಲ್ಲಿ ಭಾರತೀಯ ಅಂಚೆ ಇಲಾಖೆ ಅಂಚೆ ಚೀಟಿ “ಮೈ ಸ್ಟ್ಯಾಂಪ್ ” ನೀಡಲಾಗಿತ್ತು.ದ. ಕ. ಜಿಲ್ಲೆ ಮತ್ತು ಉಡುಪಿ ಜಿಲ್ಲೆಗಳ
ಮುಸ್ಲಿಂ ಶಿಕ್ಷಣ ಸಂಸ್ಥೆ ಗಳ ಒಕ್ಕೂಟ (ಮೀಫ್ ) ಉಪಾಧ್ಯಕ್ಷ ಕೆ. ಎಂ. ಮುಸ್ತಫ ಅಂಚೆ ಚೀಟಿ ಯನ್ನು ಕೊಡುಗೆ ನೀಡಿದರ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್, ಕರ್ನಾಟಕ ವಿಧಾನಪರಿಷತ್ ಮುಖ್ಯ ಸಚೇತಕ ಸಲೀಂ ಅಹಮದ್, ಮಾಜಿ ಸಚಿವರಾದ ಬಿ. ರಮಾನಾಥ್ ರೈ, ಮಾಜಿ ವಿಧಾನ ಪರಿಷತ್ ಶಾಸಕರಾದ ಹರೀಶ್ ಕುಮಾರ್ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ಮೊದಲಾದವರು ಉಪಸ್ಥಿತರಿದ್ದರು.