ಸುಳ್ಯ:ವಲಯ ಅರಣ್ಯಾಧಿಕಾರಿ ಎನ್.ಮಂಜುನಾಥ್ ಅವರು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಯಾಗಿ (ಎಸಿಎಫ್) ಮುಂಬಡ್ತಿ ಪಡೆದಿದ್ದಾರೆ. ಕುಶಾಲನಗರ ಕಾಡುಗೋಡಿ ಅರಣ್ಯ ತರಬೇತಿ ವಿಭಾಗದ ಅರಣ್ಯ ತರಬೇತಿ ಕೇಂದ್ರದಲ್ಲಿ ವಲಯ ಅರಣ್ಯಾಧಿಕಾರಿಯಾಗಿದ್ದ ಮಂಜುನಾಥ್ ಅವರನ್ನು
ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದ ಸುಳ್ಯ ರಬ್ಬರ್ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಸಹಾಯಕ ವಿಭಾಗೀಯ ವ್ಯವಸ್ಥಾಪಕರಾಗಿ ನೇಮಕ ಮಾಡಿ ಸರಕಾರ ಆದೇಶ ಮಾಡಿದೆ.ಸುಳ್ಯ ವಲಯ ಅರಣ್ಯಾಧಿಕಾರಿಯಾಗಿದ್ದ ಮಂಜುನಾಥ್ ಅವರಿಗೆ ಕೆಲವು ತಿಂಗಳ ಹಿಂದೆ ಕುಶಾಲನಗರ ಅರಣ್ಯ ತರಬೇತಿ ಕೇಂದ್ರಕ್ಕೆ ವರ್ಗಾವಣೆಯಾಗಿತ್ತು.ಇದೀಗ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಯಾಗಿ ಮುಂಬಡ್ತಿ ನೀಡಿ ಖಾಲಿ ಇದ್ದ ಅರಣ್ಯ ಅಭಿವೃದ್ಧಿ ನಿಗಮದ ಸುಳ್ಯ ರಬ್ಬರ್ ವಿಭಾಗದ ಸಹಾಯಕ ವಿಭಾಗೀಯ ವ್ಯವಸ್ಥಾಪಕ ಹುದ್ದೆಗೆ ನೇಮಕ ಮಾಡಲಾಗಿದೆ.














