ಅರಂತೋಡು:ಅರಂತೋಡು ತೊಡಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನಬಾರ್ಡ್ನ ಡಿಡಿಎಂ ಸಂಗೀತ ಕರ್ತ ಅವರು ಭೇಟಿ ನೀಡಿದರು. ದಕ್ಷಿಣ ಕನ್ನಡದ ಸಂಸದರಾಗಿರುವ ಕ್ಯಾಪ್ಟನ್ ಬ್ರಿಜೇಶ್ ಚೌಟರವರ ಮಹತ್ವಾಕಾಂಕ್ಷಿ ಯೋಜನೆಯಾಗಿ ಸುಳ್ಯ ತಾಲ್ಲೂಕಿನಲ್ಲಿ
ಅಡಿಕೆ ಹಳದಿ ರೋಗಕ್ಕೆ ಪರ್ಯಾಯವಾಗಿ ಕಾಫಿಯನ್ನು ಪ್ರಚುರ ಪಡಿಸುವ ದೃಷ್ಟಿಯಿಂದ ಯೋಜನೆಯನ್ನು ಹಮ್ಮಿಕೊಂಡಿದ್ದು ಈ ಯೋಜನೆ ಕಾರ್ಯಗತಗೊಳಿಸುವ ಮತ್ತು ಕೇಂದ್ರ ಸರ್ಕಾರದ ಮೂಲಕ ಆರ್ಥಿಕ ಸಹಕಾರವನ್ನು ನೀಡುವ ಉದ್ದೇಶಗಳಿಂದ ಯೋಜನೆಯನ್ನು ರೂಪಿಸುವ ಸಲುವಾಗಿ ಭೇಟಿ ನೀಡಿದರು. ಸಹಕಾರ ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ ಸಹಕಾರ ಸಂಘದ ಉಪಾಧ್ಯಕ್ಷ ಡಾ. ಲಕ್ಷ್ಮೀಶ ಕಲ್ಲುಮುಟ್ಲು ನಿರ್ದೇಶಕರಾದ ಉದಯ್ ಉಳುವಾರು,ಸಹಕಾರ ಸಂಘದ ಕಾರ್ಯನಿರ್ವಹಣಾಧಿಕಾರಿ ವಾಸುದೇವ ನಾಯಕ್, ಉಪಕಾರ್ಯನಿರ್ವಹಣಾಧಿಕಾರಿ ಪ್ರದೀಪ್ ಕುಮಾರ್ ಮತ್ತು ಸಹಕಾರ ಸಂಘದ ಸಿಬ್ಬಂದಿಗಳು ಉಪಸ್ಥಿತರಿದ್ದರು.





