ಸುಳ್ಯ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಚುನಾವಣಾ ಪ್ರಚಾರಕ್ಕಾಗಿ ಸುಳ್ಯಕ್ಕೆ ಆಗಮಿಸಿದ್ದಾರೆ. ಸುಳ್ಯ ಕೊಡಿಯಾಲಬೈಲ್ ಮಹಾತ್ಮಾಗಾಂಧಿ ಮಲ್ನಾಡ್ ಪ್ರೌಢಶಾಲೆಯ ಗ್ರೌಂಡನಲ್ಲಿ ಸಿದ್ಧಪಡಿಸಿದ ಹೆಲಿಪ್ಯಾಡ್ಗೆ ಆಗಮಿಸಿದ ನಡ್ಡಾ ಅವರನ್ನು ಬಿಜೆಪಿ ಮುಖಂಡರು ಸ್ವಾಗತಿಸಿದರು. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲ್, ಬಿಜೆಪಿ
ಸುಳ್ಯ ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿ, ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಎ.ವಿ.ತೀರ್ಥರಾಮ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮ್ದಾಸ್ ಬಂಟ್ವಾಳ, ಉಪಾಧ್ಯಕ್ಷ ಬೂಡಿಯಾರು ರಾಧಾಕೃಷ್ಣರೈ,ಕಾರ್ಯದರ್ಶಿ ಮುಳಿಯ ಕೇಶವ ಭಟ್, ಮಹೇಶ್ ಕುಮಾರ್ ಮೇನಾಲ, ಸುನಿಲ್ ಕೇರ್ಪಳ ಮತ್ತಿತರರು ಉಪಸ್ಥಿತರಿದ್ದರು. ಕುಂದಾಪುರದಿಂದ ಚುನಾವಣಾ
ಪ್ರಚಾರ ಮುಗಿಸಿ ಹೆಲಿಕಾಪ್ಟರ್ ಮೂಲಕ ಸುಳ್ಯಕ್ಕೆ ಆಗಮಿಸಿದ ಅವರು ಹೆಲಿಪ್ಯಾಡ್ನಲ್ಲಿ ಇಳಿದು ಅಲ್ಲಿಂದ ಅವರು ರಸ್ತೆ ಮಾರ್ಗವಾಗಿ ಪ್ರವೀಣ್ ನೆಟ್ಟಾರು ಅವರ ಮನೆಗೆ ತೆರಳಿದರು. ಅಲ್ಲಿಂದ ಆಗಮಿಸುವ ಅವರು ಬಳಿಕ ಚೆನ್ನಕೇಶವ ದೇವಸ್ಥಾನದ ಮುಂಭಾಗದ ವೇದಿಕೆಯಲ್ಲಿ ಸಾರ್ವಜನಿಕ ಸಭೆಯಲ್ಲಿ ಮಾತನಾಡಲಿದ್ದಾರೆ.