ಸುಳ್ಯ: ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಪ್ರಾಕೃತಿಕ ವಿಕೋಪದ ಬಗ್ಗೆ ಮುಂಜಾಗೃತಾ ಕ್ರಮಗಳ ಕುರಿತಾಗಿ ಚರ್ಚಿಸಲು ಜೂ.9ರಂದು ನಗರ ಪಂಚಾಯತ್ ಸಭಾಂಗಣದಲ್ಲಿ ಕರೆಯಲಾಗಿದ್ದ ಸಭೆಯನ್ನು ಮುಂದೂಡಲಾಗಿದೆ. ಸದಸ್ಯರಿಗೆ ಮಾಹಿತಿ ನೀಡದ ಹಿನ್ನಲೆಯಲ್ಲಿ ಬಹುತೇಕ ಸದಸ್ಯರು ಸಭೆಗೆ ಹಾಜರಾಗಿರಲಿಲ್ಲ. ಕೆಲವೇ ಕೆಲವು ಮಂದಿ
ಸದಸ್ಯರು ಮಾತ್ರ ಆಗಮಿಸಿದ್ದರು. ಪ್ರಾಕೃತಿಕ ವಿಕೋಪ ಮುಂಜಾಗೃತಾ ಕ್ರಮಗಳ ಕುರಿತು ಚರ್ಚಿಸಲು ನಗರ ಪಂಚಾಯತ್ ಆಡಳಿತಾಧಿಕಾರಿ ತಹಶಿಲ್ದಾರ್ ಅಧ್ಯಕ್ಷತೆಯಲ್ಲಿ ಸಭೆ ಕರೆಯಲಾಗಿತ್ತು. ಆದರೆ ಸದಸ್ಯರಿಗೆ ಮಾಹಿತಿ ರವಾನೆಯಾಗದ ಕಾರಣ ಸದಸ್ಯರು ಗೈರು ಹಾಜರಾಗಿದ್ದರು. ಪ್ರಮುಖ ವಿಷಯದ ಸಭೆಯ ಬಗ್ಗೆ ಸದಸ್ಯರಿಗೆ ಮಾಹಿತಿ ನೀಡದಿರುವ ಬಗ್ಗೆ ಆಗಮಿಸಿದ್ದ ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದರು. ಈ ಹಿನ್ನಲೆಯಲ್ಲಿ ಸಭೆಯನ್ನೂ ಜೂ.12ಕ್ಕೆ ಮುಂದಡಲಾಗಿದೆ. ಎಲ್ಲಾ ಸದಸ್ಯರಿಗೆ ಮಾಹಿತಿ ನೀಡಿ ಸಭೆ ನಡೆಸುವಂತೆ ಸದಸ್ಯರು ಒತ್ತಾಯಿಸಿದರು. ಇಂದಿನ ಸಭೆಯ ಬಗ್ಗೆ ಮಾಧ್ಯಮಗಳಿಗೂ ಮಾಹಿತಿ ನೀಡಿರಲಿಲ್ಲ.