ಪಂಜ:ಸುಳ್ಯ ತಾಲೂಕಿನ ಪಂಜ ನಾಗತೀರ್ಥ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಯೋಗ ದಿನಾಚರಣೆ ಕಾರ್ಯಕ್ರಮ ನಡೆಯಿತು.
ನಿವೃತ್ತ ಶಿಕ್ಷಕ ಸೀತಾರಾಮ ಕುದ್ವ ಉದ್ಘಾಟಿಸಿದರು.
ಎಸ್ಡಿಎಂಸಿ ಅಧ್ಯಕ್ಷ ಮಧು ಚಂದ್ರ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ
ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಡಾ.ದೇವಿಪ್ರಸಾದ್ ಕಾನತ್ತೂರು, ಯೋಗ ಶಿಕ್ಷಕ ಕುಸುಮಧರ ಕೆಮ್ಮೂರು ಭಾಗವಹಿಸಿದ್ದರು. ಮುಖ್ಯ ಶಿಕ್ಷಕಿ ಸರೋಜಿನಿ ಕೆಮ್ಮೂರು ಸ್ವಾಗತಿಸಿದರು, ಶಿಕ್ಷಕಿ ವನಜ ಕೊಡಂಕೆರಿ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ವಿದ್ಯಾಶ್ರೀ ವಂದಿಸಿದರು.
ಎಸ್ಡಿಎಂಸಿ ಸದಸ್ಯರು,ಪೋಷಕರು ಹಾಗೂ ಶಾಲಾ ಮಕ್ಕಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.







