ಮಂಗಳೂರು:ಗ್ರಾಮ ಪಂಚಾಯತ್ಗಳ ಬಲವರ್ಧನೆಗೆ ಕೇಂದ್ರದ ಬಿಜೆಪಿಯ ನರೇಂದ್ರ ಮೋದಿಯವರ ನಾಯಕತ್ವದ ಎನ್ ಡಿಎ ಸರಕಾರ ಕಾರಣ ಎಂದು ಮಾಜಿ ಸಂಸದ ಹಾಗೂ ಮಾಜಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.ಅವರು ಶನಿವಾರ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸುದ್ದಿ ಗೋಷ್ಠಿಯನ್ನುದ್ದೇಶಿಸಿ ಮಾತನಾಡುತ್ತಿದ್ದರು.
ಗ್ರಾಮ ಪಂಚಾಯತ್ಗಳಿಗೆ
ಕೇಂದ್ರದಿಂದ ನೇರವಾಗಿ ಅನುದಾನ ಬಿಡುಗಡೆ,ನರೇಗಾ, ಸ್ವರ್ಣ ಗ್ರಾಮ ಯೋಜನೆ ,ಪಂಚಾಯತ್ ಸದಸ್ಯರಿಗೆ ಗೌರವಧನ ಬಿಜೆಪಿ ನೇತೃತ್ವದ ಸರಕಾರದ ಕೊಡುಗೆ.ಕಳೆದ ಆರೂವರೆ ವರ್ಷ ಬಿಜೆಪಿ ಬೆಂಬಲಿತ ಶಾಸಕ ಕೋಟ ಶ್ರೀನಿವಾಸ ಪೂಜಾರಿ ವಿಧಾನ ಪರಿಷತ್ ಸದಸ್ಯರಾಗಿ ಸಕ್ರೀಯರಾಗಿದ್ದರು.ಅವರು ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದ ಕಾರಣ ತೆರವಾದ ಸ್ಥಾನಕ್ಕೆ ನಡೆದ ಉಪ ಚುನಾವಣೆಯಲ್ಲಿ ಕಿಶೋರ್ ಕುಮಾರ್ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಾರೆ ಅವರನ್ನು ಬೆಂಬಲಿಸಿ ಬಿಜೆಪಿ ಯನ್ನು ಈ ಬಾರಿಯೂ ಗೆಲ್ಲಿಸಬೇಕೆಂದು ಮನವಿ ಮಾಡಿದರು.
ರಾಜ್ಯದಲ್ಲಿ ಸಿದ್ದರಾಮಯ್ಯರ ನೇತೃತ್ವದ ಸರಕಾರ ಅಭಿವೃದ್ಧಿ ಯೋಜನೆ ಹಣ ಬಿಡುಗಡೆ ಮಾಡುತ್ತಿಲ್ಲ.ಶಾಸಕರ ನಿಧಿಯ ಯೋಜನೆಗಳಿಗೂ ಅನುದಾನ ಬಿಡುಗಡೆ ಆಗಿಲ್ಲ.ಹಿಂದಿನ ಯಡಿಯೂರಪ್ಪ, ಬೊಮ್ಮಾಯಿ ನೇತೃತ್ವದಲ್ಲಿ ರಾಜ್ಯಕ್ಕೆ ಜಿಲ್ಲೆಗೆ ಕೋಟ್ಯಾಂತರ ರೂಪಾಯಿ ಅನುದಾನ ಬಿಡುಗಡೆಯಾಗಿದೆ.
ಪಕ್ಷದ ಕಾರ್ಯಕರ್ತನಾಗಿ ಇರುತ್ತೇನೆ:
ನಿಮ್ಮ ಮುಂದಿನ ರಾಜಕೀಯ ಭವಿಷ್ಯ ಏನು ಎಂದು ಮಾಧ್ಯಮ ಪ್ರತಿನಿಧಿ ಗಳ ಪ್ರಶ್ನೆಗೆ ಉತ್ತರಿಸಿದ ಅವರು ಪಕ್ಷದ ಕಾರ್ಯಕರ್ತನಾಗಿ ಇರುತ್ತೇನೆ.ನಾನು ವಿಧಾನ ಪರಿಷತ್ ಅಭ್ಯರ್ಥಿಯ ಆಕಾಂಕ್ಷಿ ಯಾಗಿರಲಿಲ್ಲ ಪಕ್ಷ ನನಗೆ ಮೂರು ಬಾರಿ ಸಂಸದನಾಗುವ ಅವಕಾಶ, ರಾಜ್ಯಾಧ್ಯಕ್ಷ ನಾಗುವ ಅವಕಾಶ ನಾನು ಯಾವುದೇ ಬೇಡಿಕೆ ನೀಡದೆ ಕೊಟ್ಟಿದೆ, ಅದಕ್ಕಾಗಿ ನಾನು ಪಕ್ಷಕ್ಕೆ ಋಣಿಯಾಗಿದ್ದೇನೆ ಮುಂದೆಯೂ ಪಕ್ಷ ಸಂಘಟನೆಯ ಕೆಲಸ ಮಾಡುತ್ತೇನೆ ಎಂದರು.
ಸುದ್ದಿಗೋಷ್ಠಿಯಲ್ಲಿ ದ.ಕ ಜಿ ಬೆಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ,ಪ್ರಧಾನ ಕಾರ್ಯದರ್ಶಿ ಪ್ರೇಮಾನಂದ ಶೆಟ್ಟಿ, ಉಪಾಧ್ಯಕ್ಷ ರಾಕೇಶ್ ರೈ, ಜಿಲ್ಲಾ ವಕ್ತಾರ ರಾಜಗೋಪಾಲ ರೈ,ವಿಧಾನ ಪರಿಷತ್ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು, ಬಿಜೆಪಿ ಜಿಲ್ಲಾ ಸಂಘದ ಕೋಶಾಧಿಕಾರಿ ಸಂಜಯ ಪ್ರಭು ಮೊದಲಾದವರು ಉಪಸ್ಥಿತರಿದ್ದರು.