ಸುಳ್ಯ:ಸುಳ್ಯ ಪ್ರಸ್ ಕ್ಲಬ್ ಕಟ್ಟಡದ ಮುಂದುವರಿದ ಕಾಮಗಾರಿಗಳಿಗೆ ಎಲ್ಲಾ ನೆರವು, ಸಹಕಾರ ನೀಡಲಾಗುವುದು ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ನ.11ರಂದು ಸುಳ್ಯ ಪ್ರೆಸ್ ಕ್ಲಬ್ಗೆ ಭೇಟಿ ನೀಡಿದ ಅವರು ಪ್ರೆಸ್ ಕ್ಲಬ್ ಸದಸ್ಯರ ಜೊತೆ ಮಾತುಕತೆ ನಡೆಸಿದರು. ಕಟ್ಟಡದ ಕಾಮಗಾರಿಯನ್ನು ಅವರು ವೀಕ್ಷಿಸಿದರು. ಈ ಸಂದರ್ಭದಲ್ಲಿ

ಪ್ರೆಸ್ ಕ್ಲಬ್ ವತಿಯಿಂದ ನಳಿನ್ ಕುಮಾರ್ ಕಟೀಲ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಪ್ರೆಸ್ ಕ್ಲಬ್ ಅಧ್ಯಕ್ಷ ಹರೀಶ್ ಬಂಟ್ವಾಳ್ ಸ್ವಾಗತಿಸಿ, ಕಾರ್ಯದರ್ಶಿ ಜಯಪ್ರಕಾಶ್ ಕುಕ್ಕೆಟ್ಟಿ ವಂದಿಸಿದರು. ಉಪಾಧ್ಯಕ್ಷ ಜೆ.ಕೆ.ರೈ, ಗಂಗಾಧರ ಮಟ್ಟಿ ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಶಾಸಕಿ ಭಾಗೀರಥಿ ಮುರುಳ್ಯ, ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ಮಾಜಿ ಅಧ್ಯಕ್ಷರಾದ ಎಸ್.ಎನ್.ಮನ್ಮಥ, ಎ.ವಿ.ತೀರ್ಥರಾಮ, ವೆಂಕಟ್ ದಂಬೆಕೋಡಿ, ಪ್ರಧಾನ ಕಾರ್ಯದರ್ಶಿಗಳಾದ ರಾಕೇಶ್ ರೈ ಕೆಡೆಂಜಿ, ಸುಬೋದ್ ಶೆಟ್ಟಿ ಮೇನಾಲ, ನ.ಪಂ.ಮಾಜಿ ಅಧ್ಯಕ್ಷ ವಿನಯಕುಮಾರ್ ಕಂದಡ್ಕ, ಜಿಲ್ಲಾ ರೈತ ಮೋರ್ಚಾ ಉಪಾಧ್ಯಕ್ಷ ಮಹೇಶ್ ಕುಮಾರ್ ರೈ ಮೇನಾಲ, ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕೇರ್ಪಳ, ಪ್ರೆಸ್ ಕ್ಲಬ್ ನಿರ್ದೇಶಕರು, ಸದಸ್ಯರು ಮತ್ತಿತರರು ಉಪಸ್ಥಿತರಿದ್ದರು.









