ಮಂಗಳೂರು: ಕಾಂಗ್ರೆಸ್ ಚುನಾವಣಾ ಪೂರ್ವದಲ್ಲಿ ಭರವಸೆ ನೀಡಿದ್ದ ಐದು ಗ್ಯಾರಂಟಿಯನ್ನು ಕೂಡಲೇ ಷರತ್ತುರಹಿತವಾಗಿ ಜಾರಿಗೊಳಿಸದಿದ್ದರೆ ಬಿಜೆಪಿ ಬೀದಿಗಿಳಿದು ಹೋರಾಟ ನಡೆಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ಸರಕಾರ ಗ್ಯಾರಂಟಿ ಯೋಜನೆ ಜಾರಿಗೆ ಮಾರ್ಗಸೂಚಿಯ ಬಗ್ಗೆ ಮಾತನಾಡುತ್ತಿದೆ. ಆದರೆ ಚುನಾವಣಾ ಪೂರ್ವದಲ್ಲಿ ಯೋಜನೆಯ ಬಗ್ಗೆ ಯಾವುದೇ ಷರತ್ತು
ಇರಲಿಲ್ಲ ಎಂದು ಹೇಳಿದರು.ಅಧಿಕಾರ ವಹಿಸಿಕೊಂಡು 24 ಗಂಟೆಗಳಲ್ಲಿ ಗ್ಯಾರಂಟಿ ಯೋಜನೆಯನ್ನು ಜಾರಿಗೊಳಿಸುವುದಾಗಿ ಭರವಸೆ ನೀಡಿದ್ದ ಕಾಂಗ್ರೆಸ್ ಅಧಿಕಾರ ವಹಿಸಿಕೊಂಡು 20 ದಿನಗಳಾದರೂ ಯಾವುದೇ ಕ್ರಮಕೈಗೊಂಡಿಲ್ಲ.ಕಾಂಗ್ರೆಸ್ನ ಗ್ಯಾರಂಟಿ ಯೋಜನೆಗಳನ್ನು ಆರ್ಥಿಕವಾಗಿ ಜಾರಿಗೊಳಿಸುವುದು ಕಷ್ಟ ಎನ್ನುವುದು ಅವರಿಗೆ ಮನವರಿಕೆಯಾಗಿದೆ. ಆದುದರಿಂದ ಅನುಷ್ಠಾನಕ್ಕೆ ಮೀನ ಮೇಷ ಎಣಿಸಲಾಗುತಿದೆ
ಎಂದು ನಳಿನ್ ಕುಮಾರ್ ಹೇಳಿದರು. ನರೇಂದ್ರ
ಮೋದಿ ಸರ್ಕಾರದ ಅಧಿಕಾರದಲ್ಲಿ ಬಹಳಷ್ಟು ಪರಿವರ್ತನೆ ಆಗಿದೆ
ಒಂಭತ್ತು ವರ್ಷದಲ್ಲಿ ಯಾವುದೇ ಭ್ರಷ್ಟಾಚಾರ ಇಲ್ಲದ ಆಡಳಿತ ನೀಡಿದೆ. ದ.ಕ ಜಿಲ್ಲೆಗೆ 35 ಸಾವಿರ ಕೋಟಿ ರೂ. ಅನುದಾನ ಬಂದಿದೆ 3,289 ಕೋಟಿ ರೂ. ಕಾಮಗಾರಿ ಸದ್ಯ ನಡೀತಾ ಇದೆ ಎಂದು ವಿವರಿಸಿದರು.
ಸುದ್ದಿಗೋಷ್ಠಿಯಲ್ಲಿ ಮಂಗಳೂರು ನಗರದ ದಕ್ಷಿಣ ಕ್ಷೇತ್ರದ ಶಾಸಕ ಡಿ.ವೇದವ್ಯಾಸ ಕಾಮತ್, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಮೂಡಬಿದ್ರೆ, ಮಾಜಿ ವಿಧಾನ ಪರಿಷತ್ ಸದಸ್ಯ ಮೋನಪ್ಪ ಭಂಡಾರಿ, ಪಕ್ಷದ ಮುಖಂಡರುಗಳಾದ ರವಿಶಂಕರ ಮಿಜಾರು, ರಾಮದಾಸ್ ಬಂಟ್ವಾಳ, ಸುಧೀರ್ ಶೆಟ್ಟಿ ಉಪಸ್ಥಿತರಿದ್ದರು.