ಮಂಗಳೂರು : ಮೂರು ರಾಜ್ಯಗಳಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಪಡೆಯುವ ಮೂಲಕ ನರೇಂದ್ರ ಮೋದಿ ಅವರ ನಾಯಕತ್ವದ ಮೇಲೆ ದೇಶದ ಜನತೆ ವಿಶ್ವಾಸ ಇರಿಸಿದ್ದಾರೆ ಎನ್ನುವುದು ಮತ್ತೆ ಸಾಬೀತಾಗಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಪಂಚ ರಾಜ್ಯಗಳ ಚುನಾವಣೆ ಸೆಮಿ ಫೈನಲ್ ಎಂದು
ಮುಖ್ಯಮಂತ್ರಿ ಸಿದ್ದರಾಮಯ್ಯ ಸಹಿತ ಹಲವು ಕಾಂಗ್ರೆಸ್ ನಾಯಕರು ಹೇಳಿದ್ದರು. ಆದರೆ ಕಾಂಗ್ರೆಸ್ ಫೈನಲ್ ಪ್ರವೇಶಿಸಲು ವಿಫಲವಾಗಿದೆ. ಸೆಮಿಫೈನಲ್ನಲ್ಲೇ ಕಾಂಗ್ರೆಸ್ ಔಟ್ ಆಗಿದೆ ಎನ್ನುವುದನ್ನು ಈ ಫಲಿತಾಂಶ ದೃಢಪಡಿಸಿದಂತಾಗಿದೆ ಎಂದು ಅವರು ಹೇಳಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಜಯಭೇರಿ ಗಳಿಸಲು ಮೂರು ರಾಜ್ಯಗಳ ಗೆಲುವು ಹೆಚ್ಚಿನ ಶಕ್ತಿ ನೀಡಿದೆ. ವಿರೋಧ ಪಕ್ಷಗಳ ಅನುಕೂಲಕರ ಮೈತ್ರಿಯನ್ನು ಜನತೆ ತಿರಸ್ಕರಿಸಿದ್ದಾರೆ. ಮೋದಿ ಅವರು ಮತ್ತೆ ಪ್ರಧಾನಿ ಆಗುವುದನ್ನು ತಡೆಯಲು ಯಾವ ಶಕ್ತಿಯಿಂದಲೂ ಸಾಧ್ಯವಿಲ್ಲ ಎಂದು ನಳಿನ್ ಕುಮಾರ್ ಹೇಳಿದ್ದಾರೆ.












